ಬಂಗಾಳಕೊಲ್ಲಿ : ಬಂಗಾಳಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದ್ದು, ಭೂಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಶನಿವಾರ ಮಧ್ಯಾಹ್ನ 2:39ಕ್ಕೆ ಸಮುದ್ರದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.
ಭೂಕಂಪವು ಶನಿವಾರ ಮಧ್ಯಾಹ್ನ 2:39 ಕ್ಕೆ ಸಮುದ್ರದಲ್ಲಿ 10 ಕಿಮೀ ಆಳದಲ್ಲಿ ಸಂಭವಿಸಿದೆ. “ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.4 ಎಂದು ದಾಖಲಾಗಿದೆ. ಆದರೆ, ಇದುವರೆಗೆ ಯಾವುದೇ ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಇಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಕಂಪ ಸಂಭವಿಸಿತ್ತು. ಶನಿವಾರ ಬೆಳಗ್ಗೆ ಗುಲ್ ಮಾರ್ಗ್ನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 5.2 ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಬೆಳಗ್ಗೆ 8:36ಕ್ಕೆ 129 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.