Saturday, 14th December 2024

ನೇಣು ಬಿಗಿದ ಸ್ಥಿತಿಯಲ್ಲಿ ಛತ್ತೀಸಗಢ ಮಾಜಿ ಸಚಿವರ ಶವ ಪತ್ತೆ

ರಾಜಾನಂದಗಾಂವ್: ಛತ್ತೀಸಗಢ ಮಾಜಿ ಸಚಿವ ಬಿಜೆಪಿಯ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ತಮ್ಮ ರಾಜಾನಂದಗಾವ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ.

72 ವರ್ಷದ ಭಾಟಿಯಾ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾಟಿಯಾ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದರು, ಸೋಂಕಿನಿಂದ ಗುಣಮುಖರಾಗಿದ್ದರೂ ಅವರಿಗೆ ಅನಾರೋಗ್ಯ ಕಾಡುತ್ತಿತ್ತು ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಖುಜ್ಜಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಭಾಟಿಯಾ ಆಯ್ಕೆಯಾಗಿದ್ದರು. ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭಾಟಿಯಾ ಸಚಿವರಾಗಿ ಕೆಲಸ ಮಾಡಿದ್ದರು.