Thursday, 12th December 2024

ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ? ಶೀಘ್ರದಲ್ಲಿ ಸಿಹಿ ಸುದ್ದಿ: ಸಿಎಂ ಬಿಎಸ್.ವೈ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸೃತವಾಗಿ ಚರ್ಚಿಸಲಾಗಿದೆ. ಸಭೆ ಸಂಪೂರ್ಣವಾಗಿ ತೃಪ್ತಿ ತಂದಿದೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಹಿ ಸುದ್ದಿ ನೀಡುವುದಾಗಿ ಹೈಕಮಾಂಡ್ ತಿಳಿಸಿದ್ದಾರೆ. ಶೀಘ್ರದಲ್ಲೇ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೆಲ್ಲರಿಗೂ ಖುಷಿ ತಂದಿದೆ. ಇನ್ನೂ ನೀವೆಲ್ಲಾ ಕಾತುರದಿಂದ ಕಾಯುತ್ತಿರುವ ಸಚಿವ ಸಂಪುಟ ವಿಸ್ತರಣೆ ಬಗ್ಗೆ, ಆ ಕುರಿತಂತೆ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಜೀ ಜೊತೆಗೆ ವಿಸೃತವಾಗಿ ಚರ್ಚಿಸಲಾಗಿದೆ.

ಇಂದಿನ ಭೇಟಿಯಲ್ಲಿ ಸಂತಸದಿಂದಲೇ ತಿಳಿಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಆಗಲಿದ್ಯಾ ಎನ್ನುವ ಬಗ್ಗೆ ಸಿಹಿ ಸುದ್ದಿ ನೀಡಲಿದ್ದೇನೆ. ಕಾದು ನೋಡುವಂತೆ ತಿಳಿಸಿದರು.