Wednesday, 23rd October 2024

ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ನಾನೇ ಮುಂದಿನ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಗುರುವಾರ ಸ್ಪಷ್ಟಪಡಿಸಿದರು.

ಶಾಸಕಾಂಗ ಸಭೆ ಕರೆಯಿರಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರ ಬಹಿರಂಗಗೊಳ್ಳುತ್ತಿದ್ದಂತೆ ಸಿಎಂ ಬಿ.ಎಸ್.ವೈ ಸುದ್ದಿಗೋಷ್ಠಿಯಲ್ಲಿ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ. ನಾನು ಈಗಾಗಲೇ ಒಂದುವರೆ ವರ್ಷ ಮುಖ್ಯ ಮಂತ್ರಿಯಾಗಿ ಕೆಲಸ ಮಾಡಿದ್ದು, ಉಳಿದ ಅವಧಿಯೂ ಸಿಎಂ ಆಗಿರ್ತೇನೆ. ಪೂರ್ಣಾವಧಿ ಸಿಎಂ ಎಂಬುದನ್ನು ಈಗಾಗಲೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

2027ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎನ್ನುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ರೂಪಿಸಿದೆ. ರೈತರ ಅಭಿವೃದ್ಧಿಗಾಗಿ ಕೃಷಿ ಮಾರುಕಟ್ಟೆ ಸುಧಾರಣೆಗಾಗಿ ಕಾಯ್ದೆಗೆ ತಿದ್ದು ಪಡಿ ತಂದಿದ್ದಾರೆ. ಈ ಮೂಲಕ ರೈತರು ಎಲ್ಲಿ ಬೇಕಾದರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ.

ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಭೂಪಟದಲ್ಲಿ ಕರ್ನಾಟಕವನ್ನು ಒಂದನೇ ಸ್ಥಾನಕ್ಕೆ ಕೈಗೊಂಡು ಹೋಗುವ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳು ಮಾಡುತ್ತಿದ್ದೇವೆ. ಇದರ ಮಧ್ಯೆ ಬರಗಾಲ, ಅತಿವೃಷ್ಠಿ, ಕೋವಿಡ್ ನಂತಹ ಸಂದಿಗ್ಧ ಪರಿಸ್ಥಿತಿ ಯನ್ನು ಎದುರಿಸಿದ್ದೇವೆ. ಇದರ ಮಧ್ಯೆಯೂ ಬಜೆಟ್ ನಲ್ಲಿ ತಿಳಿಸಿದಂತಹ ಗುರಿಯನ್ನು ತಲುಪುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.