ಚೆನ್ನೈ: ಮುಂಬರುವ ಐಪಿಎಲ್ 2025(IPL 2025) ಆಟಗಾರರ ಮೆಗಾ ಹರಾಜಿಗೆ(IPL 2025 Auction) ಮುನ್ನವೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡುತ್ತಿರುವ ಆರ್. ಅಶ್ವಿನ್(R Ashwin) ಮರಳಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗೆ(CSK) ಮರಳಲಿದ್ದಾರೆ ಎಂದು ವರದಿಯಾಗಿದೆ. ಈ ಬಾರಿಯ ಹರಾಜಿನಲ್ಲಿ ಚೆನ್ನೈ ತಂಡ ಅಶ್ವಿನ್ ಮೇಲೆ ಕಣ್ಣಿಟ್ಟಿದೆ ಎನ್ನಲಾಗಿದೆ. ಬಾಂಗ್ಲಾ ವಿರುದ್ಧ ಚೆನ್ನೈಯಲ್ಲೇ ನಡೆದಿದ್ದ ಮೊದಲ ಟೆಸ್ಟ್ನಲ್ಲಿ ಅಶ್ವಿನ್ ಶತಕದ ಜತೆಗೆ 6 ವಿಕೆಟ್ ಕೂಡ ಕಿತ್ತಿದ್ದರು.
ಅಶ್ವಿನ್ 2008 ರಿಂದ 2015 ರವರೆಗೆ ಚೆನ್ನೈ ತಂಡದ ಪರ ಆಡಿದ್ದರು. ಕೆಲವು ತಿಂಗಳ ಹಿಂದೆ ಅಶ್ವಿನ್ಗೆ ಚೆನ್ನೈ ಫ್ರಾಂಚೈಸಿ ತಂಡದ ಹೈ-ಪರ್ಫಾರ್ಮೆನ್ಸ್ ಸೆಂಟರ್ ಕೇಂದ್ರದಲ್ಲಿ ಆಟಗಾರರ ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಸುಧಾರಣೆಯ ಮಾಡುವ ಜವಾಬ್ದಾರಿ ನೀಡಿತ್ತು .ಹೀಗಾಗಿ ಅಶ್ವಿನ್ ಮುಂದಿನ ಆವೃಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.
ತವರಿಗೆ ಮರಳಿದ ಧೋನಿ
ನವೆಂಬರ್ನಲ್ಲಿ ನಡೆಯುವ ಮೆಗಾ ಹರಾಜಿನಲ್ಲಿ ಪ್ರತಿ ತಂಡಗಳು ರಿಟೇನ್(Retain) ಮಾಡಿಕೊಳ್ಳಬಹುದಾದ ಆಟಗಾರರ ಸಂಖ್ಯೆಯನ್ನು ಬಿಸಿಸಿಐ ಬಹುತೇಕ ಅಂತಿಮಗೊಳಿಸಿದೆ ಎಂದು ವರದಿಯಾದ ಬೆನ್ನಲ್ಲೇ ಚೆನ್ನೈ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಅಮೆರಿಕ ಪ್ರವಾಸದಿಂದ ತವರಿಗೆ ಮರಳಿದ್ದಾರೆ.
ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಒಂದೊಮ್ಮೆ ಬಿಸಿಸಿಐ ಹರಾಜಿನಲ್ಲಿ ಕಟ್ಟುನಿಟ್ಟಿನ ನಿಯಮ ತಂದರೆ ಧೋನಿ ಹರಾಜಿಗೂ ಮುನ್ನವೇ ತಮ್ಮ ನಿವೃತ್ತಿಯನ್ನು ಪ್ರಕಟಿಸುವ ಸಾಧ್ಯತೆಯೂ ಕಂಡು ಬಂದಿದೆ.
ಇದನ್ನೂ ಓದಿ IPL 2025: ಬಿಸಿಸಿಐನಿಂದ ಐಪಿಎಲ್ ರಿಟೇನ್ ನಿಯಮ ಬಹುತೇಕ ಅಂತಿಮ; ಯಾವ ತಂಡಕ್ಕೆ ಲಾಭ?
ಸದ್ಯದ ಮಾಹಿತಿ ಪ್ರಕಾರ ಬಿಸಿಸಿಐ 5 ಆಟಗಾರರ ರಿಟೈನ್ಗೆ ಅವಕಾಶ ನೀಡಲಿದೆ ಎನ್ನಲಾಗಿದೆ. ಆದರೆ, ಪ್ರತಿ ತಂಡ ಗರಿಷ್ಠ ಎಷ್ಟು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಬಹುದು ಎಂಬ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಪ್ರತಿ ತಂಡ ಗರಿಷ್ಠ 5 ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ಅವಕಾಶ ನೀಡಿದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೂ ಹೆಚ್ಚಿನ ಲಾಭ ಸಿಗಲಿದೆ. ಧೋನಿಗೂ ಆಡಬಹುದು.
ಈ ಬಾರಿಯ ಹರಾಜಿನಲ್ಲಿ ರೈಟ್ ಟು ಮ್ಯಾಚ್ (ಆರ್ಟಿಎಂ) ಕಾರ್ಡ್ ಬಳಸುವ ಅವಕಾಶ ನೀಡಲಾಗುವುದು ಎಂದು ಆರಂಭದಲ್ಲಿ ಹೇಳಲಾಗಿತ್ತು. ಹೀಗಾಗಿ ಎಲ್ಲ 10 ಫ್ರಾಂಚೈಸಿಗಳು ಭಾರೀ ನಿರೀಕ್ಷೆಯಲ್ಲಿದ್ದವು. ಆದರೆ ಬಿಸಿಸಿಐ ಈ ಸಲವೂ ಆರ್ಟಿಎಂ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎನ್ನಲಾಗಿದೆ. 2018ರಿಂದ ಬಿಸಿಸಿಐ ಹರಾಜಿನಲ್ಲಿ ಈ ನಿಯಮದ ಬಳಕೆಗೆ ಅವಕಾಶ ಕಲ್ಪಿಸಿಲ್ಲ. ಈ ನಿಯಮ ಚಾಲ್ತಿಯಾಗುತ್ತಿದ್ದರೆ ಹರಾಜಿನಲ್ಲಿ ತಂಡಗಳು ತನ್ನ ಮೂಲ ಆಟಗಾರರನ್ನು ಮಾರಾಟವಾಗುವ ಗರಿಷ್ಠ ಮೊತ್ತಕ್ಕೆ ತನ್ನಲ್ಲೇ ಉಳಿಸಿಕೊಳ್ಳಲು ಅವಕಾಶ ಸಿಗುತ್ತಿತ್ತು.