Saturday, 12th October 2024

’ಕಮಲ’ ಹಿಡಿದ ಕಮಲ್ ಹಸನ್ ಆಪ್ತ ಎ.ಅರುಣಾಚಲಂ

ಚೆನ್ನೈ: ಕಮಲ್ ಹಸನ್ ಆಪ್ತ, ಮಕ್ಕಳ್ ನಿಧಿ ಮಯ್ಯಮ್ ಪಕ್ಷದ ನಾಯಕ ಎ.ಅರುಣಾಚಲಂ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಕೇಂದ್ರ ಸಚಿವ, ಬಿಜೆಪಿ ನಾಯಕ ಪ್ರಕಾಶ್ ಜಾವ್ಢೇಕರ್ ಸಮ್ಮುಖದಲ್ಲಿ ಚೆನ್ನೈನಲ್ಲಿ ಎ.ಅರುಣಾಚಲಂ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಯಾದರು. ಕಮಲ್ ಹಸನ್ ಅವರ ಮಕ್ಕಳ್ ನಿಧಿ ಮಯ್ಯಮ್ ಪಕ್ಷದಲ್ಲಿ ಪ್ರಮುಖರಾಗಿದ್ದ ಎ. ಅರುಣಾಚಲಂ ಅವರ ಬಿಜೆಪಿ ಸೇರ್ಪಡೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ದಕ್ಷಿಣದ ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ಅಣ್ಣಾಮಲೈ, ಖುಷ್ಬೂ ಸುಂದರ್ ಸೇರಿದಂತೆ ಹಲವು ಪ್ರಮುಖರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.