Thursday, 12th December 2024

ಮೂರು ದಿನ ಕೃಷಿ ಮೇಳ

ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತಪ್ಪು ಆರ್ಥಿಕ ನೀತಿಗಳಿಂದಾಗಿ ರೈತರು ಕೃಷಿಯಿಂದ ವಿಮುಖರಾಗುವ ಪರಿಸ್ಥಿತಿ ತಲೆದೋರಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಅಧ್ಯಕ್ಷ ಹೆಚ್. ಆರ್. ಬಸವರಾಜಪ್ಪ ಆತಂಕ ವ್ಯಕ್ತಪಡಿಸಿ ದರು.

ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಮೂರು ದಿನಗಳ ಕಾಲ ಡಾ.ಸಾಯಿಲ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಮೈಕ್ರೋಬಿ ಫೌಂಡೇಷನ್ ಹಾಗೂ ಯು.ಎಸ್. ಕಮ್ಯುನಿಕೇಷನ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಇದರಿಂದಾಗಿ ವರ್ಷದಿಂದ ವರ್ಷಕ್ಕೆ ರೈತರು ನಷ್ಟ ಅನುಭವಿಸು ವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಪರ ಎಂಬುದು ಕೇವಲ ಬಾಯಿ ಮಾತಿನಲ್ಲಿ ಇದೆಯೇ ವಿನಾಃ ಅಭ್ಯುದಯಕ್ಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿ ದರು.

ರೈತರ ಉತ್ಪನ್ನಗಳ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದೆ. ಆದಾಯ ಕಡಿಮೆಯಾಗುತ್ತಿದೆ. ನಷ್ಟ ಅನುಭವಿಸುತ್ತಿರುವ ರೈತರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಉತ್ಪಾದನಾ ವೆಚ್ಚಕ್ಕೆ ಶೇ.50ರಷ್ಟು ಸೇರಿಸಿ ಕೃಷಿ ಉತ್ಪನ್ನಗಳಿಗೆ ಬೆಲೆ ನಿಗದಿಪಡಿಸಬೇಕೆಂಬ ಡಾ.ಸ್ವಾಮಿ ನಾಥನ್ ವರದಿಯನ್ನು ಯಥಾವತ್ ಜಾರಿಗೊಳಿಸಿದರೆ ರೈತರ ಬದುಕು ಹಸನಾಗುತ್ತದೆ. ಇಲ್ಲದಿದ್ದರೆ ಯಾವುದೇ ಪ್ರಯೋಜನ ಆಗದು. ಸರ್ಕಾರ ಪ್ರೋತ್ಸಾಹ ಧನ ಹಾಗೂ ಸಹಾಯಧನದ ಅಗತ್ಯವೂ ಆಗ ರೈತರಿಗೆ ಬೇಕಾಗದು ಎಂದು ಅಭಿಪ್ರಾಯಪಟ್ಟರು.

ಕೃಷಿ ಇಲಾಖೆ ಉಪನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿ, ಕೃಷಿಗೆ ಅವಶ್ಯಕವಾಗಿ ಅಗತ್ಯವಿರುವ ಸಾಮಗ್ರಿಗಳನ್ನು ಒಂದೇ ಸೂರಿನಡಿ ಕಲ್ಪಿಸುವಲ್ಲಿ ಕೃಷಿ ಮೇಳ ಸಹಕಾರಿಯಾಗಿದೆ. ಖರೀದಿದಾರರು ಹಾಗೂ ರೈತರನ್ನು ಜೋಡಿಸುವ ಮೂಲಕ ಮಾರು ಕಟ್ಟೆ ಕೂಡ ಒದಗಿಸಲಿದೆ. ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಣೆ ಆಗಿರುವುದರಿಂದ ಜಿಲ್ಲೆಯಲ್ಲಿ ಸಿರಿಧಾನ್ಯ ಉತ್ಪನ್ನಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಉತ್ಪನ್ನಗಳ ಮೌಲ್ಯವರ್ಧನೆಗಾಗಿ ರೈತ ಉತ್ಪಾದಕ ಕಂಪನಿ ಗಳನ್ನು ರಚಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ತಲಾ 1 ಸಾವಿರ ಷೇರುದಾರರನ್ನು ಹೊಂದಿರುವ 19 ರೈತ ಕಂಪನಿಗಳನ್ನು ರಚಿಸ ಲಾಗಿದೆ ಎಂದು ವಿವರಿಸಿದರು.