Saturday, 14th December 2024

ತುಮಕೂರು ಕೈಗಾರಿಕೋದ್ಯಮಿಗಳ ಜೊತೆ ಸಂವಾದ ಕಾರ್ಯಕ್ರಮ

ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ತುಮಕೂರು ಕೈಗಾರಿಕೋದ್ಯಮಿಗಳ ಜೊತೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾದ ರೇಣುಕಾ, ಮೇಯರ್ ಕೃಷ್ಣಪ್ಪ, ಮತ್ತು ಆರೋಗ್ಯ ಅಧಿಕಾರಿ ಡಾ. ರಕ್ಷಿತ್ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಎಂ.ಎನ್.ಲೋಕೇಶ್, ಉಪಾಧ್ಯಕ್ಷ ಟಿ.ಜೆ.ಗಿರೀಶ್, ಕಾರ್ಯದರ್ಶಿ ಟಿ.ಟಿ.ಸತ್ಯನಾರಾಯಣ, ಕೈಗಾರಿಕಾ ಉಪಸಮಿತಿ ಚೇರ್ಮನ್ ಪಿ.ಆರ್.ಕುರಂದ್‌ವಾಡ್ ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು, ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.