Wednesday, 23rd October 2024

ಜಿಲೆಟಿನ್ ಸ್ಪೋಟ ಘಟನೆಗೆ ಸಂತಾಪ ವ್ಯಕ್ತಪಡಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಜಿಲ್ಲೆಯ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ತಿಳಿದು ಬೇಸರವಾಯಿತು. ಭಗವಂತನು ಅವರ ಕುಟುಂಬದವರಿಗೆ ಈ ದುರಂತದಿಂದಾಗಿರುವ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ತಾಲ್ಲೂಕಿನ ಅಬ್ಬಗೆರೆ ಗ್ರಾಮದಲ್ಲಿ ರಾತ್ರಿ ನಡೆದ ಭೀಕರ ಸ್ಪೋಟದ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಸಂಪೂರ್ಣ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ಹಾಗೂ ತಪ್ಪಿತಸ್ಥರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ ಎಂದು ಹೇಳಿದರು.