Wednesday, 11th December 2024

ಕೊರೊನಾದಿಂದ ಬಸವ ಕಲ್ಯಾಣ ಶಾಸಕ ನಾರಾಯಣರಾವ್ ಸಾವು

ಬೆಂಗಳೂರು : ಕೊರೊನಾ ವೈರಸ್ ಬಳಲುತ್ತಿದ್ದ ಬಸವ ಕಲ್ಯಾಣ ಶಾಸಕ ನಾರಯಣರಾವ್(65) ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನವಾಗಿತ್ತು.

ಶಾಸಕ ನಾರಾಯಣರಾವ್ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿದ್ದು, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.