Wednesday, 11th December 2024

ನಾಗ್ಪುರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ: ಬಿಜೆಪಿಗೆ ಮುಖಭಂಗ

ಮುಂಬೈ: ಏಕನಾಥ್ ಶಿಂದೆ ಬಣದ ಶಿವಸೇನೆ ಶಾಸಕರೊಂದಿಗೆ ಸರ್ಕಾರ ರಚಿಸಿರುವ ಬಿಜೆಪಿಗೆ ಇತ್ತೀಚೆಗೆ ನಡೆದ ಚುನಾವಣೆ ಯಲ್ಲಿ ಮುಖಭಂಗವಾಗಿದೆ

ಆರ್ ಎಸ್ ಎಸ್ ಪ್ರಧಾನ ಕಚೇರಿ ಹೊಂದಿರುವ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಂತಹ ಘಟಾನುಘಟಿ ಗಳು ಇರುವ ನಾಗ್ಪುರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಸೋಲಾಗಿದೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಗೋ ಗಾಣಾರ್ ಅವರ ವಿರುದ್ಧ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್.ಸಿ.ಪಿ. ಮೈತ್ರಿಯ ಮಹಾ ವಿಕಾಸ್ ಆಘಾಡಿ ಅಭ್ಯರ್ಥಿ ಸುಧಾಕರ್ ಆಡಬಾಲೆ ಗೆಲುವು ಸಾಧಿಸಿದ್ದಾರೆ.

ಇದು ಬಿಜೆಪಿಗೆ ದೊಡ್ಡ ಹಿನ್ನಡೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.