Wednesday, 11th December 2024

ಎನ್‌ಕೌಂಟರ್‌: ನಾಲ್ವರು ಮಾವೋವಾದಿಗಳು ಹತ

ರಾಯ್ಪುರ: ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿ ಗಳು ಹತರಾಗಿದ್ದಾರೆ.

ಮಿರ್ತೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಪೊಮ್ರಾ ಅರಣ್ಯ ಪ್ರದೇಶದಲ್ಲಿ 30-40 ಮಾವೋ ವಾದಿಗಳು ಅಡಗಿದ್ದ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಲಭಿಸಿದೆ.

ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದು, ಬಿಜಾಪುರ ಜಿಲ್ಲೆಯ ಮಿರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಜವಾನರೊಂದಿಗಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲರು ಹತ ರಾಗಿದ್ದಾರೆ ಎಂದು ಬಿಜಾಪುರ ಎಸ್ಪಿ ಆಂಜನೇಯ ವರ್ಷ್ನಿ ತಿಳಿಸಿದ್ದಾರೆ.