Friday, 13th December 2024

ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ಇಂದು: ನಿತೀಶ್ ’ಸಿಎಂ’ ಶತಃಸಿದ್ದ

ಪಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ ಭಾನುವಾರ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಸಭೆಯಲ್ಲಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು’ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಪರ ಬಿಜೆಪಿ 74 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಮಿತ್ರಪಕ್ಷ ಜೆಡಿಯುಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ಧವಾಗಿದೆ. ನಿತೀಶ್ ಬಿಹಾರದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ದೃಢಪಡಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ನ.10ರಂದು ಪ್ರಕಟಗೊಂಡಿದ್ದು, ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು.