Saturday, 23rd November 2024

ಈ ಬಾರಿ ವಿಜೃಂಭಣೆಯಿಲ್ಲದ ಗಣರಾಜ್ಯೋತ್ಸವ

ನವದೆಹಲಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ (ಜನವರಿ 26, 2021)ವನ್ನು ಸಾಧಾರಣವಾಗಿ ನಡೆಸಲು ತೀರ್ಮಾನಿಸಲಾಗಿದೆ. ರಾಜ್‍ಪಥ್‍ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಕಡಿಮೆ ಅಂತರದ ಪಥ ಸಂಚಲನವಿದ್ದು, ಸಣ್ಣ ಪ್ರಮಾಣದ ಕಾರ್ಯಕ್ರಮಗಳು ಮಾತ್ರ ನೆರವೇರಲಿವೆ.

ಪ್ರತಿವರ್ಷ ಗಣರಾಜ್ಯೋತ್ಸವದಂದು ನಡೆಯುವ ಕಾರ್ಯಕ್ರಮದಲ್ಲಿ ದೇಶದ ಮಿಲಿಟರಿ ಶಕ್ತಿ ಅನಾವರಣಗೊಳ್ಳುತ್ತಿತ್ತು. ಈ ಬಾರಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮುಖ್ಯ ಅತಿಥಿಗಳಾಗಿ ಭಾಗವಹಿಸ ಲಿದ್ದಾರೆ.

ಈ ಬಾರಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇವಲ 25 ಸಾವಿರ ಪ್ರೇಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸ ಲಾಗಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪ್ರವೇಶ ನಿರಾಕರಿಸಲಾಗಿದೆ.

ಪಥಸಂಚಲನದಲ್ಲಿ ತುಕಡಿಗಳಲ್ಲಿ ಇರುತ್ತಿದ್ದ 144ಮಂದಿಯನ್ನು 96ಕ್ಕಿಳಿಸಲಾಗಿದೆ. ಸೇನಾ ದಿನವನ್ನು ಜನವರಿ 15 ರಂದು ಆಚರಿಸಲಾಗುತ್ತದೆ. ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯು ಇದೇ ರೀತಿಯ ವ್ಯವಸ್ಥೆಗಳನ್ನು ಮಾಡಿದೆ. ಮೆರವಣಿಗೆಗೆ ಐಎಎಫ್‍ನ ಎರಡು ತುಕಡಿಗಳನ್ನು ಆಯ್ಕೆ ಮಾಡಲಾಗಿದ್ದು, ಅವರಲ್ಲಿ ಒಬ್ಬರು ಭಾಗವಹಿಸಲಿದ್ದಾರೆ.