ನವದೆಹಲಿ: ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಅವರು 91ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಂದಿ ನ ಏಷ್ಯಾ ಕಪ್ ಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಏಷ್ಯಾಕಪ್ 2023 ಪಾಕಿಸ್ತಾನದಲ್ಲಿ ನಡೆಯಲಿದ್ದು, ಇದಕ್ಕಾಗಿ, ಭಾರತ ತಂಡವು ಪಾಕಿಸ್ತಾನಕ್ಕೆ ಹೋಗುತ್ತದೆಯೇ ಅಥವಾ ಇಲ್ಲವೇ ಎಂಬುದು ದೊಡ್ಡ ಪ್ರಶ್ನೆ ಯಾಗಿತ್ತು.
ಏಷ್ಯಾ ಕಪ್ 2023ರ ಬಗ್ಗೆ ಬಿಸಿಸಿಐ, ಏಷ್ಯಾ ಕಪ್ ಅನ್ನು ಪಾಕಿಸ್ತಾನ ಹೊರತುಪಡಿಸಿ ಬೇರೆಡೆ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ಗೆ ಮನವಿ ಮಾಡುವುದಾಗಿ ಹೇಳಿದೆ. ತಂಡವು ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದು ತುಂಬಾ ಕಷ್ಟಕರ ವಾಗಿದೆ.
2022 ರಲ್ಲಿ ಆಡಿದ ಏಷ್ಯಾ ಕಪ್ ಅನ್ನು ಶ್ರೀಲಂಕಾದಲ್ಲಿ ಮೊದಲು ಆಡಬೇಕಾಗಿತ್ತು, ಆದರೆ ಪರಿಸ್ಥಿತಿಗಳ ದೃಷ್ಟಿಯಿಂದ ಏಷ್ಯಾ ಕಪ್ ಯುಎಇಯಲ್ಲಿ ನಡೆದಿತ್ತು. ಮುಂದಿನ ವರ್ಷ ಏಷ್ಯಾಕಪ್ ಎಲ್ಲಿ ನಡೆಯಲಿದೆ ಎಂಬುದರ ಕುರಿತು ಏನೂ ಸ್ಪಷ್ಟವಾಗಿಲ್ಲ.
2012-13 ರಿಂದ ಭಾರತ ಮತ್ತು ಪಾಕಿಸ್ತಾನ ಯಾವುದೇ ದ್ವಿಪಕ್ಷೀಯ ಸರಣಿಗಳನ್ನು ಆಡಿಲ್ಲ. 2012-13ರಲ್ಲಿ ಪಾಕಿಸ್ತಾನ ತಂಡ ಭಾರತ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಲ್ಲಿ 3 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ಮತ್ತು ODI ಪಂದ್ಯಗಳನ್ನು ಆಡಲಾ ಗಿದೆ.