Wednesday, 11th December 2024

ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳುವ ಸಂಪ್ರದಾಯ ಆರಂಭಿಸಿದವರೇ ಮೋದಿ: ಪ್ರಹ್ಲಾದ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ತಮ್ಮದೇ ಸರ್ಕಾರ ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು ಹಾಜರಾದರು. ಸರ್ಕಾರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ಹಾಜರಿದ್ದರು.

ಪ್ರಧಾನಿ ಸಭೆಯಲ್ಲಿ ಭಾಗವಹಿಸಿ ಒಂದಷ್ಟು ವಿಷಯವನ್ನು ನಮ್ಮೊಂದಿಗೆ ಹಂಚಿಕೊಳ್ಳು ತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು ಎಂದು ರಾಜ್ಯಸಭೆಯ ಕಾಂಗ್ರೆಸ್ ಮುಖಂಡ ಮಲ್ಲಿ ಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಯ ವೇಳೆ ಮೃತಪಟ್ಟ ರೈತರ ಕುಟುಂಬ ಗಳಿಗೆ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಮೋದಿ ಇಂದಿನ ಸಭೆಗೆ ಗೈರು ಹಾಜರಾಗುವ ಮೂಲಕ, ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಬೇಕು ಎಂಬ ಸಂಪ್ರದಾಯ ಉಲ್ಲಂಘಿಸಿದ್ದಾರೆ ಎಂಬ ವಿಪಕ್ಷಗಳ ಆರೋಪ ಅಲ್ಲಗಳೆದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ, “ಪ್ರಧಾನಿ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳುವ ಸಂಪ್ರದಾಯ ಇರಲಿಲ್ಲ. ಇದನ್ನು ಆರಂಭಿಸಿದವರೇ ಮೋದಿಯವರು. ಆದರೆ ಇಂದಿನ ಸಭೆಯಲ್ಲಿ ಅವರು ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದರು.

ಉತ್ತರಪ್ರದೇಶ ಲಖೀಮ್‍ಪುರ್ ಖೇರಿ ಘಟನೆಗೆ ಸಂಬಂಧಿಸಿದಂತೆ ಗೃಹಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಮದು ಬಹುತೇಕ ಎಲ್ಲ ವಿರೋಧ ಪಕ್ಷಗಳು ಆಗ್ರಹಿಸಿದವು.