ನವದೆಹಲಿ : ಗುಜರಾತ್ ನ ರಾಜ್ ಕೋಟ್ ನಲ್ಲಿ ಏಮ್ಸ್ ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ದೇಶದಲ್ಲಿ ಈಗ ಹೊಸ ಕೋವಿಡ್ -19 ಸೋಂಕಿನ ಪ್ರಕರಣಗಳು ಕಡಿಮೆಯಾಗಿವೆ. ಮುಂದಿನ ವರ್ಷ ವಿಶ್ವದ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ನಡೆಸಲು ನಾವು ಸಿದ್ಧತೆ ಮಾಡಿಕೊಳ್ಳುತ್ತೇವೆ’. ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕೆ ಅಭಿಯಾನ ನಡೆ ಸಲು ಭಾರತ ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
‘ಭಾರತವು ಜಾಗತಿಕ ಆರೋಗ್ಯದ ಕೇಂದ್ರವಾಗಿ ಹೊರಹೊಮ್ಮಿದೆ. 2021ರಲ್ಲಿ ನಾವು ಹೆಲ್ತ್ ಕೇರ್ ನಲ್ಲಿ ಭಾರತದ ಪಾತ್ರವನ್ನು ಬಲಪಡಿಸಬೇಕಿದೆ’ ಎಂದು ಅವರು ಹೇಳಿದರು.
ರಾಜ್ ಕೋಟ್ ನಲ್ಲಿ 201 ಎಕರೆ ಭೂಮಿಯನ್ನು ಸಂಸ್ಥೆಗೆ ನೀಡಲಾಗಿದ್ದು, 1,195 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ಮತ್ತು 2022ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳಲಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.