ನವದೆಹಲಿ: ಕರೊನಾ ಪಿಡುಗನ್ನು ಎದುರಿಸುವುದು ಹಾಗೂ ಕರೊನೋತ್ತರ ಪರಿಸ್ಥಿತಿ ನಿಭಾಯಿಸುವ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ ತಿಂಗಳ 18ರಂದು ಜಾಗತಿಕ ಸಭೆಯಲ್ಲಿ ಮಾತನಾಡಲಿದ್ದಾರೆ.
ಕೋವಿಡ್ ಪಿಡುಗನ್ನು ಎದುರಿಸುವ ಹಿನ್ನೆಲೆಯಲ್ಲಿ ವಿಶ್ವಾದ್ಯಂತ ವಿಜ್ಞಾನಿಗಳು, ಸಂಶೋಧಕರು ಸೇರಲಿರುವ ಗ್ರ್ಯಾಂಡ್ ಚಾಲೆಂಜಸ್ ವಾರ್ಷಿಕ ಸಭೆ 2020 ಆಯೋಜಿಸಲಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಅವರು ರಾತ್ರಿ 7.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದು, ಮುಖ್ಯಅತಿಥಿ ಆಗಿ ಮಾತನಾಡಲಿದ್ದಾರೆ.
ಈ ಸಭೆ ಕಳೆದ 15 ವರ್ಷಗಳಿಂದ ನಡೆಯುತ್ತಿದ್ದು, ಆರೋಗ್ಯ ಮತ್ತು ಅಭಿವೃದ್ಧಿ ಸಂಬಂಧಿತ ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತ ಬಂದಿದೆ. 40 ದೇಶಗಳ ಸುಮಾರು 1,600 ಗಣ್ಯರು ಈ ಜಾಗತಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.