Wednesday, 11th December 2024

ಪುಲ್ವಾಮದಲ್ಲಿ ಗುಂಡಿನ ಚಕಮಕಿ: ಉಗ್ರರು ಪರಾರಿ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಶನಿವಾರ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿಯ ಬಳಿಕ ಉಗ್ರರು ಪರಾರಿ ಯಾಗಿದ್ದಾರೆ.

ಪುಲ್ವಾಮಾದ ಮಿಟ್ರಿಗಾಮ್ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧನಾ ತಂಡದ ಮೇಲೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು.

ಗುಂಡಿನ ವಿನಿಮಯದ ನಂತರ, ಇನ್ನೊಂದು ಕಡೆಯಿಂದ ಯಾವುದೇ ಪ್ರತಿಕ್ರಿಯೆ ಕಾಣಿಸಿ ಕೊಂಡಿಲ್ಲ. ಶೋಧದ ಸಮಯದಲ್ಲಿ, ಎನ್‌ಕೌಂಟರ್ ಸ್ಥಳದಲ್ಲಿ ಯಾವುದೇ ಭಯೋತ್ಪಾದಕರು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭಿಕ ಗುಂಡಿನ ಚಕಮಕಿಯ ಸಮಯದಲ್ಲಿ, ಭಯೋತ್ಪಾದಕರು ಕತ್ತಲೆಯ ಲಾಭ ಪಡೆದು ಕೊಂಡು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.