Sunday, 8th September 2024

ಕ್ವಾಲಿಫೈಯರ್ 2 ಇಂದು: ಗೆದ್ದವರು ಫೈನಲಿಗೆ

ಅಬುಧಾಬಿ: ಐಪಿಎಲ್ ನ ಕ್ವಾಲಿಫೈಯರ್ 2 ನಡೆಯಲಿದ್ದು, ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿದೆ.

ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ಎಲಿಮಿನೇಟರ್ ಪಂದ್ಯದಲ್ಲಿ ಆರ್.ಸಿ.ಬಿ‌. ತಂಡದ ಮೇಲೆ ಭರ್ಜರಿ ಜಯ ಸಾಧಿಸಿದ್ದು ಫೈನಲ್ ಪ್ರವೇಶಿಸುವ ಉತ್ಸಾಹದಲ್ಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಕ್ವಾಲಿಫೈಯರ್ 1 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿದ್ದು ಗೆಲುವಿನ ಲಯಕ್ಕೆ ಮರಳುವ ಹುಮ್ಮಸ್ಸಿನಲ್ಲಿದ್ದಾರೆ. ಇಂದು ಗೆದ್ದವರು ಫೈನಲ್ ನಲ್ಲಿ ಮುಂಬೈ ಇಂಡಿಯನ್ಸ್ ಗೆ ಎದುರಾಳಿಯಾಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!