Monday, 25th November 2024

ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ: ಕೈ ನಾಯಕನ ವಿವಾದ

ವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾ ತ್ಮಕ ಹೇಳಿಕೆ ನೀಡಿದ್ದು, ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿಯನ್ನು ಹತ್ಯೆ ಮಾಡಿ ಎಂದು ಹೇಳಿದ್ದಾರೆ.

ಸದ್ಯ ಪಟೇರಿಯಾ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದ್ದು, ‘ಸಂವಿಧಾನ ರಕ್ಷಿಸಲು ಮೋದಿ ಯನ್ನು ಕೊಲ್ಲಲು ಜನರನ್ನು ಕೇಳು ತ್ತಿದ್ದಾರೆ. ಪ್ರಧಾನಿ ಮೋದಿ ಸಮಾಜವನ್ನು ವಿಭಜಿಸು ತ್ತಿದ್ದಾರೆ ಎಂದು ವೀಡಿಯೊದಲ್ಲಿ ಆರೋಪಿಸಿದ್ದಾರೆ.

ವಿಡಿಯೋ ಬಹಿರಂಗವಾದ ಕೆಲವೇ ಗಂಟೆಗಳಲ್ಲಿ ಮಧ್ಯಪ್ರದೇಶದ ಗೃಹ ಸಚಿವ ನರೋ ತ್ತಮ್ ಮಿಶ್ರಾ ಅವರು ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದಾರೆ.

ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯನ್ನು ರಾವಣನಿಗೆ ಹೋಲಿಸಿದ್ದರು.

ಸೋನಿಯಾ ಗಾಂಧಿ ಅವರನ್ನು ‘ಮೌತ್ ಕಾ ಸೌದಾಗರ್’ ಎಂದು ಕರೆದರು’ ಎಂದು ಮಿಶ್ರಾ ಹೇಳಿದರು.