ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆ ಹಾಕಿತು. ನಾಯಕ ಫಾಪ್ ಡು ಪ್ಲೆಸಿಸ್ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಆಘಾತ ಎದುರಾದರೂ ನಂತರ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟಿದಾರ್ ತಂಡಕ್ಕೆ ಭದ್ರ ಅಡಿಪಾಯ ಹಾಕಿದರು.
ವಿರಾಟ್ ಕೊಹ್ಲಿ 25 ರನ್ ಗಳಿಸಿ ಔಟಾದ ನಂತರ ಗ್ಲೆನ್ ಮ್ಯಾಕ್ಸ್ ವೆಲ್ 9, ಮಹಿಪಾಲ್ ಲೊಮ್ರೊರ್ 14 ರನ್ ಗಳಿಸಿ ಫೆವಿಲಿಯನ್ ಗೆ ನಿರ್ಗಮಿಸಿದರು. ನಂತರ ಜೊತೆಯಾದ ದಿನೇಶ್ ಕಾರ್ತಿಕ್, ರಜತ್ ಗೆ ಉತ್ತಮ ಸಾಥ್ ನೀಡಿದರು. 23 ಎಸೆತಗಳಲ್ಲಿ 37 ರನ್ ಗಳಿಸಿ, ನಾಟ್ ಔಟ್ ಆಗುವು ದರೊಂದಿಗೆ ತಂಡ 200ರ ಗಡಿ ದಾಟಲು ನೆರವಾದರು. ರಜತ್ ಪಾಟಿದಾರ್ 54 ಎಸೆತಗಳಲ್ಲಿ 112 ರನ್ ಬಾರಿಸಿದರು.
ಆರ್ ಸಿಬಿ ನೀಡಿದ 208 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ ಪರ ನಾಯಕ ಕೆ.ಎಲ್. ರಾಹುಲ್ 79, ದೀಪಕ್ ಹೂಡಾ 45, ಮನನ್ ವೂಹ್ರಾ 19 ರನ್ ಗಳಿಸುವು ದರೊಂದಿಗೆ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಲಷ್ಟೇ ಶಕ್ತವಾಯಿತು.
ಆರ್ ಸಿಬಿ ಪರ ಜೋಶ್ ಹೇಜಲ್ ವುಡ್ ಮೂರು ವಿಕೆಟ್ ಪಡೆಯುವ ಮೂಲಕ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದರು. ಉಳಿದಂತೆ ಹರ್ಷಲ್ ಪಟೇಲ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್-15ರ ಎಲಿಮಿನೇಟರ್ ಹಣಾಹಣಿಯಲ್ಲಿ 14 ರನ್‌ಗಳಿಂದ ಗೆಲುವು ದಾಖಲಿಸಿ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆಯಿತು. ಇದರೊಂದಿಗೆ 2016ರ ಬಳಿಕ ಫೈನಲ್ ಪ್ರವೇಶಿಸುವ ಆಸೆಯನ್ನು ಜೀವಂತ ವಾಗಿರಿಸಿಕೊಂಡಿತು.