ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, 2014ಕ್ಕೂ ಹಿಂದಿನ ಬೆಲೆ ಮತ್ತು ಈಗಿನ ಬೆಲೆ ಯನ್ನು ತುಲನೆ ಮಾಡಿದ್ದಾರೆ.
‘ಎಲ್ಪಿಜಿ ಸಿಲಿಂಡರ್ 2014ರಲ್ಲಿ ₹410 ಇತ್ತು. ₹827 ಸಬ್ಸಿಡಿ ದೊರೆಯುತ್ತಿತ್ತು. ಈಗ ಎಲ್ಪಿಜಿ ₹999 ದಾಟಿದೆ. ಶೂನ್ಯ ಸಬ್ಸಿಡಿ ದೊರೆಯುತ್ತಿದೆ. ಭಾರತೀಯ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಕಲ್ಯಾಣಕ್ಕಾಗಿ ಕಾಂಗ್ರೆಸ್ ಆಡಳಿತವೇ ಸೂಕ್ತ. ಇದು ನಮ್ಮ ಆರ್ಥಿಕ ನೀತಿಯೂ ಆಗಿದೆ’ ಎಂದು ಬರೆದುಕೊಂಡಿದ್ದಾರೆ.