Saturday, 14th December 2024

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಕ್ಕೆ ಗಣ್ಯರ ನುಡಿನಮನ

ನವದೆಹಲಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿ ದರು. ಗಾಂಧೀಜಿ ಅವರ ಸ್ಮಾರಕ ರಾಜ್’ಘಾಟ್ ತೆರಳಿದ ಪ್ರಧಾನಿ ಮೋದಿಯವರು ನಮನ ಸಲ್ಲಿಸಿದರು.

ಮಹಾತ್ಮ ಗಾಂಧೀಜಿಯವರ ಜನ್ಮದಿನ ಹಿನ್ನೆಲೆಯಲ್ಲಿ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ರಚಿಸುವಲ್ಲಿ ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ವತಂತ್ರ ಭಾರತದ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 117ನೇ ಜನ್ಮದಿನದಂದು ದೇಶದ ಗಣ್ಯರು ಅವರನ್ನು ಸ್ಮರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಯ ವಿಜಯ ಘಾಟ್ ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.

ತಮ್ಮ ಸಂದೇಶದಲ್ಲಿ, ಸರಳತೆಯ ಸಾಕಾರದಂತಿದ್ದ ಲಾಲ್ ಬಹದ್ದೂರ್ ಶಾಸ್ತ್ರಿಯವರು ಈ ದೇಶದ ಕಲ್ಯಾಣಕ್ಕಾಗಿ ಬದುಕಿದರು. ಅವರು ಭಾರತಕ್ಕಾಗಿ ಮಾಡಿದ ಕೆಲಸಗಳನ್ನು ಅತ್ಯಂತ ಕೃತಜ್ಞತೆಯಿಂದ ಅವರ ಜಯಂತಿ ಸಂದರ್ಭದಲ್ಲಿ ನೆನೆಯುತ್ತೇವೆ ಎಂದು ಹೇಳಿದ್ದಾರೆ.