Friday, 13th December 2024

ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ: ಮುಖ್ಯ ಅರ್ಚಕ ಸತ್ಯೇಂದ್ರ ದಾಸ್

ಅಯೋಧ್ಯೆ: ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ದಾಸ್, ತುಂತುರು ಮಳೆಯ ಬಳಿಕ ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು ಮತ್ತು ದೇವಾಲಯದ ಅಧಿಕಾರಿಗಳು ಅಗತ್ಯ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಒತ್ತಾಯಿಸಿದರು.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದ ಗರ್ಭಗುಡಿಯಲ್ಲಿ ಮೊದಲ ಮಳೆಗೆ ಮೇಲ್ಛಾವಣಿಯಿಂದ ನೀರು ತೊಟ್ಟಿಕ್ಕಲು ಆರಂಭವಾಗಿದೆ. ಈ ಕುರಿತು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.

ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ದೇವಾಲಯಕ್ಕೆ ಆಗಮಿಸಿ ಮೇಲ್ಛಾವಣಿಯನ್ನು ದುರಸ್ತಿ ಮಾಡಲು ಸೂಚನೆ ನೀಡಿದ್ದಾರೆ.

ಮಿಶ್ರಾ ಅವರು ದೇವಸ್ಥಾನದ ಕಾಮಗಾರಿ ಕುರಿತು ಮಾತನಾಡಿ, ಈ ವರ್ಷದ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ. ಡಿಸೆಂಬರ್‌ ವೇಳೆಗೆ ಮಂದಿರ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ನೀರಿನ ಸೋರಿಕೆಯಾಗಿದೆ.