Thursday, 21st November 2024

370ನೇ ವಿಧಿಯ ನಿಬಂಧನೆ ರದ್ದು: ಅರ್ಜಿ ವಿಚಾರಣೆ ಸುಪ್ರೀಂ ಒಪ್ಪಿಗೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸ ಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸವಲತ್ತನ್ನು ಹಿಂತೆಗೆದುಕೊಂಡ ನಿರ್ಧಾರ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ವಾದ ಮಂಡಿಸಿದ ಹಿರಿಯ ವಕೀಲ ಶೇಖರ್ ನಾಫಡೆ ಹೇಳಿದ್ದನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಗಮನಿಸಿತು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದ್ದಾಗಿದೆ ಎಂದು ಹಿರಿಯ ವಕೀಲರು ತಿಳಿಸಿದರು.

ಬೇಸಿಗೆ ರಜೆಯ ನಂತರ ಅರ್ಜಿಗಳನ್ನು ಆಲಿಸಲು ಐವರು ನ್ಯಾಯಾಧೀಶರ ಪೀಠವನ್ನು ಮರು ರಚನೆ ಮಾಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ.

2019 ರ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸುವ ಹಲವಾರು ಅರ್ಜಿಗಳನ್ನು ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸಂವಿಧಾನ ಪೀಠಕ್ಕೆ 2019 ರಲ್ಲಿ ಉಲ್ಲೇಖಿಸಲಾಗಿತ್ತು.