Saturday, 14th December 2024

ಸಮುದಾಯ ಭವನಗಳಲ್ಲಿ ಸಮಾಜಮುಖಿ ಕಾರ್ಯ: ಕೆ.ಗೋಪಾಲಯ್ಯ

ಬೇಲೂರು: ಸಮುದಾಯ ಭವನಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು, ಅದರ ಸದ್ಬಳಕೆಗೆ ಮುಂದಾಗಬೇಕು ಎಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಪಟ್ಟಣದ ಹಳೇಬೀಡು ರಸ್ತೆಯಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಸಮುದಾಯ ಭವನಕ್ಕೆ ಎರಡು ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಗುಣಮಟ್ಟದ ಸಮುದಾಯ ಭವನ ನಿರ್ಮಿಸಿಕೊಳ್ಳಲು ಆದ್ಯತೆ ನೀಡಬೇಕು, ಭವನಗಳನ್ನು ನಿರ್ಮಾಣ ಮಾಡಿ ಅವನ್ನು ಹಾಗೇ ಬಿಡುವುದಲ್ಲ. ಅವು ಸಮುದಾಯದ ಪ್ರತಿಯೊಬ್ಬರಿಗೂ ಚರ್ಚೆ, ವಿಚಾರ ವಿನಿಮಯ ಮಾಡಿಕೊಳ್ಳುವ ಕೇಂದ್ರಗಳಾಗಿ ನಿರ್ಮಾಣವಾಗಬೇಕು ಎಂದರು ತಾಲೂಕಿನ ಅಭಿವೃದ್ಧಿಗಾಗಿ ಸರಕಾರದಿಂದ ಹೆಚ್ಚಿನ ಅನುದಾನ ನೀಡಲಾಗುತ್ತದೆ ಎಂದರು.

ಶಾಸಕ ಕೆ.ಎಸ್.ಲಿಂಗೇಶ್, ತಾ.ಪಂ.ಅಧ್ಯಕ್ಷೆ ಸುಮಾ ಪರಮೇಶ್, ಸದಸ್ಯ ಮಂಜುನಾಥ್, ಜಿ.ಪಂ‌.ಸದಸ್ಯೆ ಲತಾ ಮಂಜೇಶ್ವರಿ, ಮಾಜಿ ಶಾಸಕ ವಿಶ್ವನಾಥ್, ಜಿಲ್ಲಾಧಿಕಾರಿ ಆರ್.ಗಿರೀಶ್, ಎಸ್ ಪಿ ಶ್ರೀನಿವಾಸ್ ಗೌಡ ತಾ.ಪಂ.ಇಒ ರವಿಕುಮಾರ್, ತಹಸೀಲ್ದಾರ್ ಎನ್.ವಿ.ನಟೇಶ್  ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು