Wednesday, 11th December 2024

ನಟ ವಿಜಯ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ (38) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ವಿದೇಶ ಪ್ರವಾಸಕ್ಕೆ ತೆರಳಿದ್ದ ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ಪಂದನಾ ಅವರು ಕುಟುಂಬಸ್ಥರು ಮತ್ತು ಸ್ನೇಹಿತೆಯರೊಂದಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು.

ವಿಜಯ ರಾಘವೇಂದ್ರ ಪತ್ನಿ ನಿಧನರಾಗಿದ್ದು, ಅವರ ಕುಟುಂಬವನ್ನು ಆಘಾತಕ್ಕೀಡು ಮಾಡಿದೆ. ಸ್ಪಂದನಾ ಕುಟುಂಬದ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಅವರ ಪಾರ್ಥಿವ ಶರೀರವನ್ನು ನಾಳೆ ಬೆಂಗಳೂರಿಗೆ ತರಲಾಗುತ್ತಿದೆ ಎಂದು ತಿಳಿದು ಬಂದಿದೆ.

ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಅವರು ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್​ಗಳಲ್ಲೊಬ್ಬರಾಗಿದ್ದರು. ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಮ್ ಅವರ ಮಗಳಾಗಿದ್ದರು. ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಇಬ್ಬರೂ ಪರಸ್ಪರ ಪ್ರೀತಿಸಿ 2007ರಲ್ಲಿ ಮದುವೆ ಆಗಿದ್ದರು.

ಸ್ಪಂದನಾ ಅವರು ಕ್ರೇಜಿಸ್ಟಾರ್​​ ರವಿಚಂದ್ರನ್ ಅಭಿನಯದ ‘ಅಪೂರ್ವ’ ಸಿನಿಮಾದಲ್ಲಿ ಚಿಕ್ಕ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ಇದೀಗ ವಿಜಯ ರಾಘವೇಂದ್ರ ಮತ್ತು​​ ಅವರ ತಂದೆ ಚಿನ್ನೇಗೌಡ, ಸಹೋದರ ಶ್ರೀಮುರಳಿ ಹಾಗೂ ಸ್ಪಂದನಾ ತಂದೆ ಶಿವರಾಮ್ ಬ್ಯಾಂಕಾಕ್​ಗೆ ತೆರಳಲಿದ್ದಾರೆ.