Friday, 13th December 2024

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಸೋಮವಾರದಿಂದ ರಾಜ್ಯಾದ್ಯಂತ ವಾರ್ಷಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 2750 ಕೇಂದ್ರ ಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆಗಳು ನಡೆಯಲಿವೆ. ರಾಜ್ಯದಲ್ಲಿ ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾ ಯಿಸಿದ್ದಾರೆ.

ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 54,254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ. ರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸ ಲಾಗಿದೆ.

ನೀರು, ವಿದ್ಯುತ್, ಕುಳಿತುಕೊಳ್ಳುವ ಸ್ಥಳ, ಫ್ಯಾನ್ ಹೀಗೆ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.ರೂಢಿ ಪರೀಕ್ಷೆಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಅನುತ್ತೀರ್ಣರಾಗದಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆ ರೂಢಿ ಪರೀಕ್ಷೆ ಎಂಬ ವಿನೂತನ ಪ್ರಯತ್ನ ಮಾಡಿದೆ.

ಕಲಿಕೆಯಲ್ಲಿ ಹಿಂದುಳಿಯುತ್ತಿದ್ದ ಮಕ್ಕಳಿಗೆ ಕಳೆದ ನಾಲ್ಕೈದು ತಿಂಗಳಿಂದ ಪ್ರತಿನಿತ್ಯ ಪರೀಕ್ಷೆ ನಡೆಸುವ ಮೂಲಕ ಅವರಲ್ಲಿನ ಭಯ ಹಾಗೂ ಆತಂಕ ಹೋಗಲಾಡಿಸುವ ಪ್ರಯತ್ನ ಶಿಕ್ಷಣ ಇಲಾಖೆ ಮಾಡಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಇದೇ ಮೊದಲ ಬಾರಿಗೆ ಇಂತಹ ಪ್ರಯತ್ನಕ್ಕೆ ಕೈಹಾಕಿತ್ತು. ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದು ಸೋಮವಾರದ ಪರೀಕ್ಷೆಯ ದಿನ ಗೊತ್ತಾಗಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ಪ್ರಥಮ ಭಾಷೆ) 25-03-2024ಸಮಾಜ ವಿಜ್ಞಾನ-27-03-2024ವಿಜ್ಞಾನ-30-03-2024ಗಣಿತ-02-04-2024ಅರ್ಥಶಾಸ್ತ್ರ (ಕೋರ್ ಸಬ್ಜೆಕ್ಟ್‌)-03-04-2024ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ)-04-04-2024ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)-06-04-2024

ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆಗಳು ನಡೆದಿವೆ.