Thursday, 12th December 2024

ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಮಾರ್ಗಸೂಚಿ: ಡಾ.ಕೆ. ಸುಧಾಕರ್ ಸುಳಿವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸುಳಿವು ನೀಡಿದ್ದಾರೆ.

ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಮಾತುಕತೆ ನಡೆಸಿ ಹೊಸ ಮಾರ್ಗಸೂಚಿ ಪ್ರಕಟಿಸುವ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಿದ್ದರೂ ಜನರು ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಸಿನಿಮಾ, ಮಾರ್ಕೆಟ್ ಬಳಿ ಅನಗತ್ಯವಾಗಿ ಜನರು ಸೇರುತ್ತಿದ್ದಾರೆ. ಇದರಿಂದ ಕೊರೊನಾ ವೈರಸ್ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರಿ ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಿಎಂ ಕಾರ್ಯದರ್ಶಿ ಜೊತೆ ಸಿಎಸ್ ಸಭೆ ನಡೆಸುತ್ತಿದ್ದಾರೆ.

ಮಧ್ಯಾಹ್ನದ ವೇಳೆಗೆ ಮಾರ್ಗಸೂಚಿ ಹೊರಬರಲಿದೆ ಎಂದು ಹೇಳಿದ್ದಾರೆ.