ಲೈಂಗಿಕ ಆರೋಪ ಕೇಳಿ ಬಂದ ಹಿನ್ನೆಲೆ ಇವರನ್ನು ಕೋಚ್ ಸ್ಥಾನದಿಂದ ಅಮಾನತು ಮಾಡಿ ಉತ್ತರಖಂಡದ ಕ್ರಿಕೆಟ್ ಅಸೋಸಿಯೇಷನ್ ಆದೇಶ ಹೊರಡಿಸಿತ್ತು.
ನರೇಂದ್ರ ಷಾ ತಮ್ಮ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಮೂವರು ಮಹಿಳಾ ಕ್ರಿಕೆಟಿಗರಿಗೆ (ಒಬ್ಬರು ಅಪ್ರಾಪ್ತೆ ಸೇರಿ) ಲೈಂಗಿಕ ಕಿರುಕುಳ ನೀಡಿದ್ದರು ಎಂದು ದೂರಲಾಗಿತ್ತು. ಈ ಪ್ರಕರಣ ಹೊರ ಬರುತ್ತಿದ್ದಂತೆ ನರೇಂದ್ರ ಷಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ರಿಷಿಕೇಶದಲ್ಲಿನ ಏಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾ ಗಿತ್ತು. ಗುರುವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆ ತಕ್ಷಣ ಷಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಪಂಕಜ್ ಗೈರೋಲಾ ತಿಳಿಸಿದ್ದಾರೆ.
ಸಂತ್ರಸ್ತೆಯೊಬ್ಬರ ತಂದೆ ನೀಡಿದ ದೂರಿನಲ್ಲಿ, ‘ನನ್ನ ಮಗಳಿಗೆ ಷಾ ಹಲವಾರು ರೀತಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಪೋನ್‌ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾನೆ. ತಾನು ಹೇಳಿದ ಹಾಗೆ ಕೇಳದಿದ್ದರೆ ಮಗಳ ಕ್ರಿಕೆಟ್ ಭವಿಷ್ಯವನ್ನು ಹಾಳು ಮಾಡು ವುದಾಗಿ ಬೆದರಿಕೆ ಹಾಕಿದ್ದಲ್ಲದೇ ಜಾತಿ ನಿಂದನೆ ಮಾಡಿದ್ಧಾನೆ’ ಎಂದು ಆರೋಪ ಮಾಡಿದ್ದಾರೆ.
ಆರೋಪಿ ನರೇಂದ್ರ ಷಾ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.