Thursday, 12th December 2024

ನಾಡಹಬ್ಬ ವಿಜಯದಶಮಿಗೆ ಶುಭ ಕೋರಿದ ಗಣ್ಯರು

ಬೆಂಗಳೂರು: ನಾಡಹಬ್ಬ ವಿಜಯದಶಮಿಗೆ ಮುಖ್ಯಮಂತ್ರಿ ಸೇರಿದಂತೆ ಮತ್ತಿತರ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೇರಿದಂತೆ ಅನೇಕ ಗಣ್ಯರು ಹಬ್ಬದ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೂ ಮಾಡಿ, ನಾಡಿನ ಸಮಸ್ತ ಜನತೆಗೆ ಆಯುಧಪೂಜೆ ಹಾಗೂ ಮಹಾ ನವಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಅಧಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ, ಜಗನ್ಮಾತೆಯ ಆರಾಧನೆಯ ಜೊತೆಗೆ, ನಮ್ಮನ್ನು ಸಲಹುವ, ನೆರವು ನೀಡುವ, ರಕ್ಷಿಸುವ ವಸ್ತು ವಿಶೇಷಗಳಲ್ಲಿ ದೇವರನ್ನು ಪೂಜಿಸುವ ಆಯುಧಪೂಜೆಯ ಈ ದಿನವು ಎಲ್ಲರ ಬಾಳಿನಲ್ಲಿ ಮಂಗಳ ಉಂಟು ಮಾಡಲಿ ಎಂದು ಕೂ ಮಾಡಿದ್ದಾರೆ.

‘ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳು. ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ಯ ಕೃಪೆಯಿಂದ ಎಲ್ಲರಿಗೂ ಆರೋಗ್ಯ, ಐಶ್ವರ್ಯ, ನೆಮ್ಮದಿ, ಸುಖ, ಶಾಂತಿ ದೊರೆಯಲಿ’ ಎಂದು ಎಚ್. ಡಿ. ದೇವೇಗೌಡ ಅವರು ಕೂ ಮಾಡಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕೂ ಮಾಡಿ, ‘ಆಯುಧಪೂಜೆ ಮತ್ತು ವಿಜಯದಶಮಿಯ ಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ನಾಡಿನ ಮತ್ತು ದೇಶದ ಎಲ್ಲರಿಗೂ ಸಕಲ ಸನ್ಮಂಗಳವನ್ನುಂಟುಮಾಡಲಿ. ಮಹಿಷಾಸುರ ಮರ್ದಿನಿ ಎಲ್ಲ ದುಷ್ಟ ಶಕ್ತಿಗಳ ಮದ೯ನ ಮಾಡಿ ನೆಮ್ಮದಿ ನೀಡಲಿ’ ಎಂದಿದ್ದಾರೆ.