Thursday, 12th December 2024

Viral Video: ಹಸುವಿನ ಮೇಲೆ ಅತ್ಯಾಚಾರ ಎಸಗಿದ ವಕೀಲ ಕ್ಯಾಮೆರಾದಲ್ಲಿ ಸಿಕ್ಕಿ ಬಿದ್ದ!

Viral Video


ದೇಶದ ಹಲವು ಕಡೆಗಳಲ್ಲಿ ಅತ್ಯಾಚಾರ ಪ್ರಕರಣಗಳು ನಿತ್ಯ ನಡೆಯುತ್ತಲೇ ಇರುತ್ತವೆ. ಕಾಮುಕರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಬಾಲಕಿಯರು, ಮಹಿಳೆಯರು, ವೃದ್ಧ ಮಹಿಳೆಯರ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ. ಅಷ್ಟೇ ಅಲ್ಲದೆ ಮನುಷ್ಯರ ಜೊತೆ ಮಾತ್ರವಲ್ಲದೇ ಮೂಕ ಪ್ರಾಣಿಗಳನ್ನು ಕೂಡ ತಮ್ಮ ಕಾಮದಾಹಕ್ಕೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಛತ್ತೀಸ್‌ಗಢದ ರಾಯ್ಪುರದಲ್ಲಿ 50 ವರ್ಷದ ಆಶಿಶ್ ಮಿಶ್ರಾ ಎಂಬ ವಕೀಲ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಳೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ.

ಈ ಘಟನೆಯ ವಿಡಿಯೊದಲ್ಲಿ, ಮಿಶ್ರಾ ಮುಂಜಾನೆ 4 ಗಂಟೆ ಹೊತ್ತಿಗೆ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ನಂತರ ಅವನು ಸ್ಥಳದಿಂದ ಓಡಿಹೋಗಿದ್ದಾನೆ. ಈ ಘಟನೆ ಹತ್ತಿರದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ಸೋಶೀಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ಇದು ಅನೇಕ ಜನರ ಗಮನ ಸೆಳೆದಿದೆ. ವರದಿಗಳ ಪ್ರಕಾರ, ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಕೂಡಲೇ, ರಾಯ್ಪುರ ಪೊಲೀಸರು ವ್ಯಕ್ತಿಯನ್ನು ಗುರುತಿಸಿ, ಬಂಧಿಸಿ ಪ್ರಾಣಿ ಕ್ರೌರ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಭಿಲಾಯ್ ಮೂಲದ ಮಿಶ್ರಾ ಭಂತಗಾಂವ್ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್‍ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಸ್ಕೂಟರ್‌ನಲ್ಲಿ ತೆರಳಿ, ಮನೆಯೊಂದರ ಮುಂದೆ ಹಸುವನ್ನು ಕಟ್ಟಿ ಹಾಕಿದ್ದ ಸ್ಥಳಕ್ಕೆ ತೆರಳಿ ಅತ್ಯಾಚಾರ ಎಸಗಿದ್ದಾನೆ. ಈ ಕ್ರೂರ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ನಂತರ, ಈ ಪ್ರದೇಶದ ಸ್ಥಳೀಯ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆ ಎದುರು ಧರಣಿ ನಡೆಸಿದ್ದರು. ಮಿಶ್ರಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ:ಇಬ್ಬರ ಜೀವ ತೆಗೆದ ಶ್ರೀಮಂತ ಮಹಿಳೆಯಿಂದ ಹಣ ಪಡೆದು ಸಂತ್ರಸ್ತ ಕುಟುಂಬದಿಂದ ಕ್ಷಮಾದಾನ!

ಮಧ್ಯಪ್ರದೇಶದ ಜಬಲ್ಪುರದ ಬೀದಿಯಲ್ಲಿ ವ್ಯಕ್ತಿಯೊಬ್ಬ ಹಸುವಿಗೆ ಚಿತ್ರಹಿಂಸೆ ನೀಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾದ ಒಂದು ವಾರದ ನಂತರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮಧ್ಯಪ್ರದೇಶದ ಜಬಲ್ಪುರದ ಬೀದಿಯಲ್ಲಿ ನಡೆದ ಈ ಘಟನೆಯಲ್ಲಿ ಆರೋಪಿಗಳು ಹಸುವಿನ ಬಾಯಿ ಮತ್ತು ಖಾಸಗಿ ಭಾಗಗಳಿಗೆ ಕಬ್ಬಿಣದ ರಾಡ್ ಅನ್ನು ತುರುಕಿಸಿದ್ದಾರೆ ಎಂಬುದಾಗಿ ತಿಳಿದುಬಂದಿತ್ತು. ಘಟನೆಯ ಭಯಾನಕ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಕೂಡಲೇ ಪೊಲೀಸರು ಆರೋಪಿಯನ್ನು ಮನ್ಶರಾಮ್ ಪಟೇಲ್ ಎಂದು ಗುರುತಿಸಿ ಜೈಲಿಗೆ ಕಳುಹಿಸಿದ್ದಾರೆ.