ವಿಶ್ವೇಶ್ವರ ಭಟ್ ಅವರ 103ನೇ ಪುಸ್ತಕ 'ಬದುಕುಳಿದವರು ಕಂಡಂತೆʼ ಬಿಡುಗಡೆ
Badukulidavaru Kandanthe Book: ವಿಶ್ವವಾಣಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರ 103ನೇ ಪುಸ್ತಕ 'ಬದುಕುಳಿದವರು ಕಂಡಂತೆʼ ಅನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬೆಂಗಳೂರಿನಲ್ಲಿ ಭಾನುವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಶ್ವವಾಣಿ ಪುಸ್ತಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕಿ ಸುಷ್ಮಾ ಭಟ್, ಇಸ್ರೇಲ್ ಕಾನ್ಸುಲೇಟ್ ಜನರಲ್‌ನ ಡೆಪ್ಯುಟಿ ಕಾನ್ಸುಲ್ ಜನರಲ್ ಇನ್ಬಾಲ್ ಸ್ಟೋನ್ ಉಪಸ್ಥಿತರಿದ್ದರು.