ಬೆಳಗಾವಿಯಲ್ಲಿ ಇ-ಖಾತಾ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ವಿವಿಧ ಇಲಾಖೆಗಳ ಸಚಿವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಇ-ಖಾತಾ ಲೋಕಾರ್ಪಣೆಗೊಳಿಸಲಾಯಿತು. -
ಇ-ಖಾತಾ
ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಗುರುವಾರ (ಡಿಸೆಂಬರ್ 18) ಮುಖ್ಯಮಂತ್ರಿ ಸಿದ್ದರಾಮಯ್ಯ ಇ-ಖಾತಾ ಲೋಕಾರ್ಪಣೆಗೊಳಿಸಿದರು. ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಚಿವರು ಭಾಗಿ
ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವರಾದ ಬೈರತಿ ಸುರೇಶ್, ರಹೀಂಖಾನ್, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಪೊನ್ನಣ್ಣ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂಅಹಮದ್, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಶಾಸಕರಾದ ಶ್ರೀನಿವಾಸ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಮನೆಯ ಹಕ್ಕು ಪತ್ರಗಳ ವಿತರಣೆ
ಇದೇ ವೇಳೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಮತ್ತು ಮನೆಯ ಹಕ್ಕು ಪತ್ರಗಳ ವಿತರಣೆಯೂ ನಡೆಯಿತು.
ಪಾರದರ್ಶಕತೆ
ಕರ್ನಾಟಕ ಸರ್ಕಾರವು ಆಸ್ತಿ ಖರೀದಿ ಮತ್ತು ಮಾರಾಟದಲ್ಲಿ ಪಾರದರ್ಶಕತೆಯನ್ನು ಖಾತರಿಪಡಿಸಲು ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮುಖ್ಯ ಉದ್ದೇಶವು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಒಳಗೊಂಡಂತೆ, ಎಲ್ಲ ಆಸ್ತಿಗಳನ್ನು ಡಿಜಿಟಲ್ ದಾಖಲೆಯಲ್ಲಿ ಸೇರ್ಪಡೆಗೊಳಿಸುವುದು.
ಸನ್ಮಾನ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು.