ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಳಗಾವಿಯಲ್ಲಿ ಇ-ಖಾತಾ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ವಿವಿಧ ಇಲಾಖೆಗಳ ಸಚಿವರು ಉಪಸ್ಥಿತರಿದ್ದರು.

ಬೆಳಗಾವಿಯಲ್ಲಿ ಇ-ಖಾತಾ ಲೋಕಾರ್ಪಣೆಗೊಳಿಸಲಾಯಿತು.
1/5

ಇ-ಖಾತಾ

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಗುರುವಾರ (ಡಿಸೆಂಬರ್‌ 18) ಮುಖ್ಯಮಂತ್ರಿ ಸಿದ್ದರಾಮಯ್ಯ ಇ-ಖಾತಾ ಲೋಕಾರ್ಪಣೆಗೊಳಿಸಿದರು. ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

2/5

ಸಚಿವರು ಭಾಗಿ

ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವರಾದ ಬೈರತಿ ಸುರೇಶ್, ರಹೀಂಖಾನ್, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಪೊನ್ನಣ್ಣ, ವಿಧಾನ‌ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ಅಹಮದ್, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಶಾಸಕರಾದ ಶ್ರೀನಿವಾಸ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

3/5

ಮನೆಯ ಹಕ್ಕು ಪತ್ರಗಳ ವಿತರಣೆ

ಇದೇ ವೇಳೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಮತ್ತು ಮನೆಯ ಹಕ್ಕು ಪತ್ರಗಳ ವಿತರಣೆಯೂ ನಡೆಯಿತು.

4/5

ಪಾರದರ್ಶಕತೆ

ಕರ್ನಾಟಕ ಸರ್ಕಾರವು ಆಸ್ತಿ ಖರೀದಿ ಮತ್ತು ಮಾರಾಟದಲ್ಲಿ ಪಾರದರ್ಶಕತೆಯನ್ನು ಖಾತರಿಪಡಿಸಲು ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮುಖ್ಯ ಉದ್ದೇಶವು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಒಳಗೊಂಡಂತೆ, ಎಲ್ಲ ಆಸ್ತಿಗಳನ್ನು ಡಿಜಿಟಲ್ ದಾಖಲೆಯಲ್ಲಿ ಸೇರ್ಪಡೆಗೊಳಿಸುವುದು.

5/5

ಸನ್ಮಾನ

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು.