ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಬಿ.ಕೆ.ಹರಿಪ್ರಸಾದ್ ಜೊತೆ ಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌- ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ

Siddaramaiah-BK Hari prasad Meeting: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಇಂದು ಬೆಳಗ್ಗೆ ಮಹತ್ವದ ಸಭೆ ನಡೆಸಿದ್ದಾರೆ. ಇದೇ ವೇಳೆ ಮಂಗಳೂರಿನ ಕೋಮು ಗಲಭೆ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ.

1/4

ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳ‍ಗ್ಗೆ ಪಕ್ಷದ ಹಿರಿಯ ಮುಖಂಡ, ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರು ಜೊತೆ ಉಪಾಹಾರ ಸೇವಿಸಿದ್ದು, ಈ ವೇಳೆ ಹಲವು ಮಹತ್ವದ ಸಂಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

2/4

ಮಂಗಳೂರಿನ ಕೋಮುಗಲಭೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ. ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

3/4

ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

4/4

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಜೊತೆ ಸಚಿವ ಜಮೀರ್‌ ಅಹ್ಮದ್‌, ಕಾಂಗ್ರೆಸ್‌ ಮುಖಂಡ ರಕ್ಷಿತ್‌ ಶಿವರಾಂ‍ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.