Photos: ಅದ್ಧೂರಿಯಾಗಿ ನಡೆದ ಕಾವ್ಯಾ ಮಾರನ್-ಅನಿರುದ್ಧ್ ಮದುವೆ ಆರತಕ್ಷತೆ; ಎಲ್ಲರ ಗಮಸೆಳೆದ ಸಿಎಂ ವಿಜಯ್ ಫ್ಯಾಮಿಲಿ
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ‘ಸನ್ ಗ್ರೂಪ್’ ಒಡೆಯ ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ಅವರ ವಿವಾಹ ಆರತಕ್ಷತೆ ಶನಿವಾರ (ನ. 21) ಚೆನ್ನೈನಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ‘ದಳಪತಿ’ ವಿಜಯ್, ಸೂಪರ್ಸ್ಟಾರ್ ರಜನಿಕಾಂತ್, ನಟ ಕಮಲ್ ಹಾಸನ್ ಮತ್ತು ಮಾಜಿ ಸಿಎಂ ಎಂ.ಕೆ. ಸ್ಟಾಲಿನ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನಸೆಳೆದರು. ವಿಶೇಷವೆಂದರೆ, ವಿಜಯ್, ಅವರ ತಾಯಿ ಶೋಭಾ ಚಂದ್ರಶೇಖರ್ ಮತ್ತು ಪತ್ನಿ ಸಂಗೀತಾ ಪ್ರತ್ಯೇಕವಾಗಿ ಸಮಾರಂಭಕ್ಕೆ ಆಗಮಿಸಿದ್ದರು. ಈ ಸಮಾರಂಭದ ಕಲರ್ಫುಲ್ ಫೋಟೋಗಳು ಇಲ್ಲಿವೆ.
ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಕಾವ್ಯಾ ಮಾರನ್ ಅವರ ಮದುವೆ ಆರತಕ್ಷತೆ ಸಮಾರಂಭಕ್ಕೆ ನಟ ಸಿದ್ದಾರ್ಥ್ ಮತ್ತು ನಟಿ ಅದಿತಿ ರಾವ್ ಹೈದರಿ ದಂಪತಿ ಆಗಮಿಸಿ ನವಜೋಡಿಗೆ ಶುಭಾಶಯ ಕೋರಿದರು.
ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಪ್ರಿಯ ತಮಿಳು ನಟಿ ಸ್ನೇಹಾ ಅವರು ಅನಿರುದ್ಧ್ ರವಿಚಂದರ್ ಹಾಗೂ ಕಾವ್ಯಾ ಮಾರನ್ ದಂಪತಿಗೆ ಹೃದಯಪೂರ್ವಕ ಶುಭಾಶಯ ತಿಳಿಸಿದರು.
ಆರತಕ್ಷತೆ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮುಖ್ಯಮಂತ್ರಿ ವಿಜಯ್ ಅವರು ಪರಸ್ಪರ ಕೈಕುಲುಕಿ ಆತ್ಮೀಯವಾಗಿ ಮಾತನಾಡಿದ್ದು, ಈ ಕ್ಷಣದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಹಿರಿಯ ರಾಜಕಾರಣಿ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಸಮಾರಂಭಕ್ಕೆ ಆಗಮಿಸಿ ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್ ಜೋಡಿಗೆ ಶುಭ ಹಾರೈಸಿದರು.
ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ತಮ್ಮ ಪುತ್ರನೊಂದಿಗೆ ಆರತಕ್ಷತೆಗೆ ಆಗಮಿಸಿ, ಅನಿರುದ್ಧ್ ಮತ್ತು ಕಾವ್ಯಾ ದಂಪತಿಗೆ ಶುಭಾಶಯ ತಿಳಿಸಿ ಹರಸಿದರು.
ಖ್ಯಾತ ನಿರ್ದೇಶಕ ಎಸ್. ಶಂಕರ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ವಿವಾಹ ಆರತಕ್ಷತೆಗೆ ಆಗಮಿಸಿ ನವದಂಪತಿಗೆ ಶುಭ ಕೋರಿದರು.
ಮುಖ್ಯಮಂತ್ರಿ ವಿಜಯ್ ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ಅವರು ಕೂಡ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಬಾಲಿವುಡ್ ಹಾಗೂ ಕಾಲಿವುಡ್ನ ಸ್ಟಾರ್ ನಿರ್ದೇಶಕ ಅಟ್ಲೀ ಅವರು ತಮ್ಮ ಪತ್ನಿ ಪ್ರಿಯಾ ಅವರೊಂದಿಗೆ ಆರತಕ್ಷತೆಗೆ ಆಗಮಿಸಿ ನವಜೋಡಿಗೆ ವಿಶ್ ಮಾಡಿದರು.
ತಮಿಳು ಚಿತ್ರರಂಗದ ಜನಪ್ರಿಯ ನಟ ಕಾರ್ತಿ ಅವರು ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾಗಿ ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್ ಜೋಡಿಗೆ ಶುಭ ಹಾರೈಸಿದರು.
ಆಂಧ್ರಪ್ರದೇಶ ಸರ್ಕಾರದ ಸಚಿವ ನಾರಾ ಲೋಕೇಶ್ ಅವರು ತಮ್ಮ ಪತ್ನಿಯೊಂದಿಗೆ ಆಗಮಿಸಿ ನವದಂಪತಿಗೆ ಶುಭ ಕೋರಿದರು.
ಮುಖ್ಯಮಂತ್ರಿ ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಅವರು ಸಮಾರಂಭಕ್ಕೆ ಆಗಮಿಸಿ ಅನಿರುದ್ಧ್ ಹಾಗೂ ಕಾವ್ಯಾ ದಂಪತಿಗೆ ಆಶೀರ್ವದಿಸಿದರು.
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕೂಡ ಈ ಅದ್ಧೂರಿ ವಿವಾಹ ಆರತಕ್ಷತೆ ಸಮಾರಂಭಕ್ಕೆ ಆಗಮಿಸಿ ನವಜೋಡಿಗೆ ಶುಭ ಹಾರೈಸಿದರು.
ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಒಟ್ಟಿಗೆ ನಿಂತು ಫೋಟೋಗೆ ಪೋಸ್ ನೀಡಿದ್ದು, ಒಂದೇ ಕಡೆ ದಿಗ್ಗಜರ ಸಮಾಗಮ ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಸಮಾರಂಭದಲ್ಲಿ ಮಾಜಿ ಸಿಎಂ ಎಂ.ಕೆ. ಸ್ಟಾಲಿನ್, ರಜನಿಕಾಂತ್ ಹಾಗೂ ಕಾವ್ಯಾ ಮಾರನ್ ಅವರ ತಂದೆ ಕಲಾನಿಧಿ ಮಾರನ್ ಅವರೊಂದಿಗೆ ಮುಖ್ಯಮಂತ್ರಿ ವಿಜಯ್ ಅವರು ಒಟ್ಟಿಗೆ ಕಾಣಿಸಿಕೊಂಡು ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವೇದಿಕೆಗೆ ಆಗಮಿಸಿ ನವದಂಪತಿ ಅನಿರುದ್ಧ್ ಮತ್ತು ಕಾವ್ಯಾ ಅವರಿಗೆ ಶುಭಾಶಯಗಳನ್ನು ತಿಳಿಸಿದರು.
ಕಮಲ್ ಹಾಸನ್ ಅವರು ಆರತಕ್ಷತೆಯಲ್ಲಿ ಪಾಲ್ಗೊಂಡು ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್ ಜೋಡಿಗೆ ಪ್ರೀತಿಯಿಂದ ಆಶೀರ್ವದಿಸಿದರು.
ತಮ್ಮ ಸೋದರಳಿಯ ಅನಿರುದ್ಧ್ ರವಿಚಂದರ್ ಅವರ ವಿವಾಹ ಆರತಕ್ಷತೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಪತ್ನಿ ಲತಾ ದಂಪತಿ ಸಂಭ್ರಮದಿಂದ ಭಾಗವಹಿಸಿ ಮಿಂಚಿದರು.
ಖ್ಯಾತ ನಿರ್ದೇಶಕ ಮಣಿರತ್ನಂ ಹಾಗೂ ನಟಿ ಸುಹಾಸಿನಿ ದಂಪತಿ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿ ನವಜೋಡಿಗೆ ಶುಭ ಹಾರೈಸಿದರು.