ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ವಿಕೆಟ್‌ ಕೀಪರ್‌ ಆಗಿ ನೂತನ ಮೈಲುಗಲ್ಲು ತಲುಪಿದ ಎಂಎಸ್‌ ಧೋನಿ!

ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಎಂಎಸ್‌ ಧೋನಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ವಿಕೆಟ್‌ ಕೀಪರ್‌ ಆಗಿ 200 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದಿದ್ದಾರೆ. ಆ ಮೂಲಕ ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ವಿಕೆಟ್‌ ಎನಿಸಿಕೊಂಡಿದ್ದಾರೆ. ಸೋಮವಾರ ಲಖನೌ ಸೂಪರ್‌ ಜಯಂಟ್ಸ್‌ ತಂಡದ ಮೂವರು ಪೆವಿಲಿಯನ್‌ಗೆ ಕಳುಹಿಸುವ ಮೂಲಕ ಧೋನಿ ಈ ದಾಖಲೆ ಬರೆದಿದ್ದಾರೆ.

ಐಪಿಎಲ್‌ ಟೂರ್ನಿಯಲ್ಲಿ ನೂತನ ದಾಖಲೆ ಬರೆದ ಎಂಎಸ್‌ ಧೋನಿ.
1/6

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಎಂಎಸ್‌ ಧೋನಿ ನೂತನ ದಾಖಲೆಯನ್ನು ಬರೆದಿದ್ದಾರೆ. ಐಪಿಎಲ್‌ ಟೂರ್ನಿಯಲ್ಲಿ 200 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದ ಮೊದಲ ಆಟಗಾರ ಎಂಬ ಕೀರ್ತಿಗೆ ಥಲಾ ಖ್ಯಾತಿಯ ಎಂಎಸ್‌ ಧೋನಿ ಭಾಜನರಾಗಿದ್ದಾರೆ.

2/6

ಸೋಮವಾರ ಲಖನೌದ ಏಕನಾ ಕ್ರೀಡಾಂಗಣದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 30ನೇ ಪಂದ್ಯದಲ್ಲಿ ಎಂಎಸ್‌ ಧೋನಿ ಸ್ಟಂಪ್ಸ್‌ ಹಿಂದೆ ಮೂವರು ಬ್ಯಾಟ್ಸ್‌ಮನ್‌ಗಳನ್ನು ಔಟ್‌ ಮಾಡಿದರು. ಆ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಈ ವಿಶೇಷ ದಾಖಲೆಯನ್ನು ಬರೆದಿದ್ದಾರೆ.

3/6

ಲಖನೌ ಸೂಪರ್‌ ಜಯಂಟ್ಸ್‌ ತಂಡದ ಇನಿಂಗ್ಸ್‌ನ 14ನೇ ಓವರ್‌ನಲ್ಲಿ ರವೀಂದ್ರ ಜಡೇಜಾ ಎಸೆತದಲ್ಲಿ ಆಯುಷ್‌ ಬದೋನಿ ಮುಂದೆ ಬಂದು ಬ್ಯಾಟ್‌ ಬೀಸಿದ್ದರು. ಆದರೆ, ಚೆಂಡಿನ ಲೈನ್‌ ಅನ್ನು ಅರಿಯುವಲ್ಲಿ ವಿಫಲರಾದರು. ಈ ವೇಳೆ ಎಂಎಸ್‌ ಧೋನಿ ಯುವ ಬ್ಯಾಟ್ಸ್‌ಮನ್‌ ಅನ್ನು ಸ್ಟಂಪ್‌ ಔಟ್‌ ಮಾಡಿ 200ನೇ ಬ್ಯಾಟ್ಸ್‌ಮನ್‌ ಅನ್ನು ಔಟ್‌ ಮಾಡಿದರು.

4/6

200 ಬ್ಯಾಟ್ಸ್‌ಮನ್‌ಗಳನ್ನು ಔಟ್‌ ಮಾಡಲು ಎಂಎಸ್‌ ಧೋನಿ 271 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ. ಲಖನೌ ಇನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ರಿಷಭ್‌ ಪಂತ್‌ ಕ್ಯಾಚ್‌ ಅನ್ನು ಎಂಎಸ್‌ ಧೋನಿ ಪಡೆದರು. ಒಟ್ಟಾರೆ ಎಂಎಸ್‌ ಧೋನಿ 201 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದಿದ್ದರೆ. ಇದರಲ್ಲಿ ಅವರು 155 ಕ್ಯಾಚ್‌ಗಳು ಹಾಗೂ 46 ಸ್ಟಂಪ್‌ ಒಳಗೊಂಡಿವೆ.

5/6

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಾಜಿ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ 182 ಬ್ಯಾಟ್ಸ್‌ಮನ್‌ಗಳನ್ನು ಔಟ್‌ ಮಾಡುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಆರ್‌ಸಿಬಿ ಸಿಗ್ಗಜ ಎಬಿ ಡಿ ವಿಲಿಯರ್ಸ್‌ 126 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

6/6

ಅಂದ ಹಾಗೆ ಈ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 5 ವಿಕೆಟ್‌ಗಳ ಗೆಲುವು ಪಡೆಯಿತು. 167 ರನ್‌ ಗುರಿ ಹಿಂಬಾಲಿಸಿದ ಸಿಎಸ್‌ಕೆ 19.3 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 168 ರನ್‌ ಗಳಿಸಿ ಗೆಲುವು ಪಡೆಯಿತು. ಶಿವಂ ದುಬೆ 43* ಹಾಗೂ ಎಂಎಸ್‌ 26* ರನ್‌ ಗಳಿಸಿದರು. ಧೋನಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.