Anchor Anushree: ಅನುಶ್ರೀ ಮದುವೆಗೆ ಯಾರೆಲ್ಲ ಬಂದಿದ್ರು ಗೊತ್ತಾ? ಫೋಟೋ ನೋಡಿ
ಸ್ಯಾಂಡಲ್‌ವುಡ್‌ನ ಆ್ಯಂಕರ್ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹು ದಿನಗಳ ಗೆಳೆಯ ಕೊಡಗು ಮೂಲದ ರೋಷನ್ ಜೊತೆಗೆ ವಿವಾಹವಾಗಿದ್ದಾರೆ. ಚಿತ್ರರಂಗದ ಗಣ್ಯರಾದ ಶಿವ ರಾಜ್ ಕುಮಾರ್ ಹಾಗೂ ಅವರ ಧರ್ಮ ಪತ್ನಿ ಗೀತಾ ಶಿವ ರಾಜ್‌ಕುಮಾರ್ ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.
ಆ್ಯಂಕರ್ ಅನುಶ್ರೀ ಅವರು ಇಂದು ಉದ್ಯಮಿ ರೋಷನ್ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ವಿವಾಹ ಕಾರ್ಯಕ್ರಮಕ್ಕೆ ಅತ್ಯಾಪ್ತರನ್ನು ಮಾತ್ರ ಆಹ್ವಾನಿಸಲಾಗಿದೆ.
ಮದುವೆಗೆ ಹಿರಿಯ ನಟಿಯರಾದ ತಾರಾ ಅನುರಾಧ, ಪ್ರೇಮ, ತರುಣ್ ಸುಧೀರ್ ಸೇರಿದಂತೆ ಹಲವರು ಆಗಮಿಸಿ ಶುಭ ಹಾರೈಸಿದ್ದಾರೆ. 10: 56 ನಿಮಿಷಕ್ಕೆ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ ರೋಷನ್. ಅನುಶ್ರೀ ,ರೋಷನ್ ಮದುವೆಗೆ ಕುಟುಂಬಸ್ಥರುಹಾಗೂ ಸ್ನೇಹಿತರು ಸಾಕ್ಷಿಯಾದರು.
ಈವರೆಗೆ ಅನುಶ್ರೀ ಅವರು ತಮ್ಮ ಮದುವೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಅನುಶ್ರೀ ಹಾಗೂ ರೋಷನ್ ಅವರದ್ದು ಲವ್ ಮ್ಯಾರೇಜ್. ಪುನೀತ್ ರಾಜ್‌ಕುಮಾರ್ ಅವರ ಗಂಧದ ಗುಡಿ ರಿಲೀಸ್ ಟೈಂನಲ್ಲಿ ಇವರಿಬ್ಬರು ಭೇಟಿಯಾಗಿದ್ದರು. ಅಷ್ಟೇ ಅಲ್ಲದೇ ರಾಜ್ ಕುಟುಂಬಕ್ಕೂ ರೋಷನ್ ಹತ್ತಿರದವರು ಎಂದು ಹೇಳಲಾಗಿದೆ.
ರಾಜ್ ಬಿ ಶೆಟ್ಟಿ, ನೆನಪಿರಲಿ ಪ್ರೇಮ್, ಕಾವ್ಯ ಶಾ, ಸೋನಲ್ ಮೊಂಥೆರೋ, ನಟ ನಾಗಭೂಷಣ್, ಚೈತ್ರಾ ಜೆ ಆಚಾರ್, ನಟ ಶರಣ್ ಸೇರಿದಂತೆ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ಅನುಶ್ರೀ ಮದುವೆಗೆ ಬಂದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಮದುವೆಗೆ ಆಹ್ವಾನವಿಲ್ಲದೆ ಯಾರಿಗೂ ಪ್ರವೇಶ ನೀಡುತ್ತಿಲ್ಲ. ಸ್ಟುಡಿಯೋ ಒಳಗೆ ಬಿಟ್ಟಿಲ್ಲ ಎಂದು ಅನುಶ್ರೀ ಫ್ಯಾನ್ಸ್ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ನಟ ಡಾಲಿ ಧನಂಜಯ್, ನಾಗಭೂಷಣ ಸೇರಿ ಹಲವು ಕಲಾವಿದರು ವಿವಾಹದಲ್ಲಿ ಭಾಗಿಯಾಗಿದ್ದರು.