Honorary Award: ಸಾಧಕ ಮಹನೀಯರಿಗೆ ಪುರಸ್ಕಾರದ ಗೌರವ
ಉತ್ತರ ಕನ್ನಡ ಜಿಲ್ಲೆಯ ಪ್ರಪ್ರಥಮ ದೈನಿಕ ಲೋಕಧ್ವನಿಯು ಜಿಲ್ಲೆಯ ಪತ್ರಿಕೋದ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ ಪ್ರದಾನ ಎಂಬ ಕಾರ್ಯಕ್ರಮವನ್ನು ಆಯೋಜಿ ಸಿತ್ತು. ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಪ್ರಶಸ್ತಿ ನೀಡಿ ಗೌರವಿಸಿದರು.
-
Ashok Nayak
Jan 25, 2026 11:56 AM
ಉತ್ತರ ಕನ್ನಡ ಜಿಲ್ಲೆಯ ಪ್ರಪ್ರಥಮ ದೈನಿಕ ಲೋಕಧ್ವನಿಯು ಜಿಲ್ಲೆಯ ಪತ್ರಿಕೋದ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ ಪ್ರದಾನ ಎಂಬ ಕಾರ್ಯಕ್ರಮವನ್ನು ಆಯೋಜಿ ಸಿತ್ತು.
ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಈ ವೇಳೆ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಸಚಿವ ಶಿವರಾಜ ತಂಗಡಗಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಮಂಕಾಳ ಎಸ್.ವೈದ್ಯ, ಯಲ್ಲಾಪುರ- ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ದುಬೈನಲ್ಲಿ ನೆಲೆಸಿರುವ ಹೋಟೆಲ್ ಉದ್ಯಮಿ ಪ್ರವೀಣ್ ಶೆಟ್ಟಿ, ವಿಶ್ವವಾಣಿ ಪ್ರಧಾನ ಸಂಪಾದಕ ಹಾಗೂ ಜನಶಕ್ತಿ ವಿಶ್ವಸ್ಥ ಮಂಡಳಿಯ ಧರ್ಮದರ್ಶಿ ವಿಶ್ವೇಶ್ವರ ಭಟ್ ಅತ್ಯಂತ ಸಂಭ್ರಮದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.