ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಹೇಗಿತ್ತು? ಇಲ್ಲಿದೆ ಫೋಟೋಸ್
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ತೆರೆದ ಜೀಪ್ನಲ್ಲಿ ಪರೇಡ್ ಪರಿವೀಕ್ಷಿಸಿದರು. ನಂತರ ಅವರು ಗೌರವ ರಕ್ಷೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ವಿಧಾನಸಭಾ ಅಧ್ಯಕ್ಷರು, ವಿಧಾನ ಪರಿಷತ್ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಸಂಗ್ರಹ ಚಿತ್ರ -
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
77ನೇ ಗಣರಾಜ್ಯೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಸಂದೇಶ ನೀಡಿ, ಸಂವಿಧಾನ ರಕ್ಷಣೆ ಅಗತ್ಯ, ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಹಾಗೂ ಶಕ್ತಿಶಾಲಿ ರಾಜ್ಯಕ್ಕಾಗಿ ಜನರ ಸಹಕಾರ ಕೋರಿದರು.
ಕಾರ್ಯಕ್ರಮಕ್ಕೆ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, 100ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ, ಬೆಳಗ್ಗೆ 8.30ರಿಂದ 10.30ರವರೆಗೆ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಜಾರಿ ಮಾಡಲಾಗಿದೆ.
2025-26ರ ಬಜೆಟ್ನಲ್ಲಿ ಬಂಡವಾಳ ವೆಚ್ಚಗಳಿಗೆ 83,200 ಕೋಟಿ ರೂ. ಮೀಸಲಿಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 1.5 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸೆಮಿಕಂಡಕ್ಟರ್, ಏರೋಸ್ಪೇಸ್, ಕ್ವಾಂಟಮ್ ತಂತ್ರಜ್ಞಾನ ಸೇರಿದಂತೆ ಉನ್ನತ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚುತ್ತಿದೆ ಎಂದು ಸರ್ಕಾರದ ಸಾಧನೆಯ ಕುರಿತು ರಾಜ್ಯಪಾಲರು ಮಾತನಾಡಿದ್ದಾರೆ.