ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಆರ್‌ಸಿಬಿ ಇನ್ನೂ ಎಷ್ಟು ಪಂದ್ಯ ಗೆಲ್ಲಬೇಕು? ಎಲ್ಲಾ ತಂಡಗಳ ಪ್ಲೇಆಫ್ಸ್‌ ಲೆಕ್ಕಾಚಾರ!

IPL 2025 Playoffs Scenario: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲ ಅವಧಿಯ ಪಂದ್ಯಗಳ ಮುಗಿದಿವೆ. ಇದೀಗ ಟೂರ್ನಿಯ ಎರಡನೇ ಅವಧಿಯ ಪಂದ್ಯಗಳು ನಡೆಯುತ್ತಿವೆ. ಪ್ಲೇಆಫ್ಸ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಎಲ್ಲಾ ತಂಡಗಳು ಕೂಡ ಪ್ರಯತ್ನದಲ್ಲಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಪಂದ್ಯಗಳು ಅತ್ಯಂತ ತೀವ್ರ ಕುತೂಹಲ ಕೆರಳಿಸಿವೆ. ಅಂದ ಹಾಗೆ ಎಲ್ಲಾ ತಂಡಗಳ ಪ್ಲೇಆಫ್ಸ್‌ ಲೆಕ್ಕಚಾರ ಇಲ್ಲಿದೆ.

1/7

ಗುಜರಾತ್‌ ಟೈಟನ್ಸ್‌

ಕಳೆದ ಆವೃತ್ತಿಯಲ್ಲಿ ನೀರಸ ಪ್ರದರ್ಶನ ತೋರಿದ್ದ ಗುಜರಾತ್‌ ಟೈಟನ್ಸ್‌ ತಂಡ, ಪ್ರಸಕ್ತ ಋತುವಿನಲ್ಲಿ ಅತ್ಯುತ್ತಮವಾಗಿ ಕಮ್‌ಬ್ಯಾಕ್‌ ಮಾಡಿದೆ. ಇಲ್ಲಿಯವರೆಗೂ ಆಡಿದ 8 ಪಂದ್ಯಗಳಿಂದ 6 ರಲ್ಲಿ ಗೆಲುವು ಪಡೆದು ಒಟ್ಟು 12 ಅಂಕಗಳನ್ನು ಹೊಂದಿದ್ದು ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. +1.104ರ ಅತ್ಯುತ್ತಮ ರನ್‌ ರೇಟ್‌ ಹೊಂದಿರುವ ಗುಜರಾತ್‌ ಟೈಟನ್ಸ್‌ ಇನ್ನುಳಿದ 6 ಪಂದ್ಯಗಳ ಪೈಕಿ ಎರಡರಲ್ಲಿ ಗೆಲುವು ಪಡೆದರೆ ಪ್ಲೇಆಫ್ಸ್‌ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿದೆ.

2/7

ಡೆಲ್ಲಿ ಕ್ಯಾಪಿಟಲ್ಸ್‌

ಅಕ್ಷರ್‌ ಪಟೇಲ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಕೂಡ 2025ರ ಐಪಿಎಲ್‌ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದೆ. ಇಲ್ಲಿಯತನಕ ಆಡಿದ 7 ಪಂದ್ಯಗಳಲ್ಲಿ 5ರಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಇನ್ನುಳಿದ 7 ಪಂದ್ಯಗಳ ಪೈಕಿ ಡೆಲ್ಲಿ ತಂಡ ಮೂರರಲ್ಲಿ ಗೆಲುವು ಪಡೆದರೆ, ಟೂರ್ನಿಯ ಪ್ಲೇಆಫ್ಸ್‌ಗೆ ಲಗ್ಗೆ ಇಡಲಿದೆ.

3/7

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕೂಡ ಈ ಸೀಸನ್‌ನಲ್ಲಿ ಗಮನಾರ್ಹ ಪ್ರದರ್ಶನವನ್ನು ತೋರುತ್ತಿದೆ. ಇಲ್ಲಿಯವರೆಗೂ ಆಡಿದ 8 ಪಂದ್ಯಗಳಲ್ಲಿ ಆರ್‌ಸಿಬಿ 5ರಲ್ಲಿ ಗೆಲುವು ಪಡೆದಿದೆ ಹಾಗೂ +1.104ರ ರನ್‌ರೇಟ್‌ ಆಧಾರದ ಮೇಲೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದೆ. ಇನ್ನುಳಿದ 6 ಪಂದ್ಯಗಳ ಪೈಕಿ 3 ಪಂದ್ಯಗಳನ್ನು ಗೆದ್ದರೆ ಆರ್‌ಸಿಬಿ ಪ್ಲೇಆಫ್ಸ್‌ಗೆ ಅಧಿಕೃತವಾಗಿ ಪ್ರವೇಶ ಮಾಡಲಿದೆ.

4/7

ಪಂಜಾಬ್‌ ಕಿಂಗ್ಸ್‌, ಲಖನೌ ಸೂಪರ್‌ ಜಯಂಟ್ಸ್‌

ಪಂಜಾಬ್‌ ಕಿಂಗ್ಸ್‌ (+0.177) ಹಾಗೂ ಲಖನೌ ಸೂಪರ್‌ ಜಯಂಟ್ಸ್‌ (+0.088) ತಂಡಗಳು ಕೂಡ ಆರ್‌ಸಿಬಿ (+1.104) ತಂಡದಂತೆ 10 ಅಂಕಗಳನ್ನು ಕಲೆ ಹಾಕಿವೆ. ಆದರೆ, ರನ್‌ರೇಟ್‌ ಕಡಿಮೆ ಇರುವ ಕಾರಣ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕ್ರಮವಾಗಿ 4 ಮತ್ತು 5 ನೇ ಸ್ಥಾನಗಳನ್ನು ಅಲಂಕರಿಸಿವೆ. ಆದರೆ, ಈ ಎರಡೂ ತಂಡಗಳು ಕೂಡ ತಮ್ಮ-ತಮ್ಮ ಕೊನೆಯ 6 ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಪಡೆದರೆ, ಪ್ಲೇಆಫ್ಸ್‌ಗೆ ಲಗ್ಗೆ ಇಡಲಿವೆ.

5/7

ಮುಂಬೈ ಇಂಡಿಯನ್ಸ್‌

ಸ್ಟಾರ್‌ ಆಟಗಾರರನ್ನು ಒಳಗೊಂಡಿದ್ದರೂ ಮುಂಬೈ ಇಂಡಿಯನ್ಸ್‌ ತಂಡ ಟೂರ್ನಿಯ ಮೊದಲ ಅವಧಿಯಲ್ಲಿ ಸತತ ವೈಫಲ್ಯ ಅನುಭವಿಸಿತ್ತು. ಆದರೆ, ಇದೀಗ ಹ್ಯಾಟ್ರಿಕ್‌ ಗೆಲುವು ಪಡೆಯುವ ಮೂಲಕ 8 ಅಂಕಗಳನ್ನು ಕಲೆ ಹಾಕಿದೆ. ಇನ್ನುಳಿದ 6 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಪಡೆದರೆ ಐದು ಬಾರಿ ಚಾಂಪಿಯನ್ಸ್‌ ಪ್ಲೇಆಫ್ಸ್‌ಗೆ ಅಧೀಕೃತವಾಗಿ ಲಗ್ಗೆ ಇಡಲಿದೆ.

6/7

ಕೋಲ್ಕತಾ ನೈಟ್‌ ರೈಡರ್ಸ್‌

ಗುಜರಾತ್‌ ಟೈಟನ್ಸ್‌ ವಿರುದ್ದ ತನ್ನ ಕೊನೆಯ ಪಂದ್ಯದಲ್ಲಿ 39 ರನ್‌ಗಳಿಂದ ಸೋಲು ಅನುಭವಿಸಿದ ಬಳಿಕ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ಪ್ಲೇಆಫ್ಸ್‌ ಹಾದಿ ಕಠಿಣವಾಗಿದೆ. ಇಲ್ಲಿಯವರೆಗೂ ಆಡಿದ 8 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3ರಲ್ಲಿ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಪಡೆದರೆ, ಕೆಕೆಆರ್‌ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲಿದೆ. ಒಂದು ವೇಳೆ ಇದರಲ್ಲಿ ಎರಡರಲ್ಲಿ ಸೋತರೂ ಟೂರ್ನಿಯಿಂದ ಹೊರಬೀಳಲಿದೆ.

7/7

ರಾಜಸ್ಥಾನ್‌, ಹೈದರಾಬಾದ್‌, ಚೆನ್ನೈ

ರಾಜಸ್ಥಾನ್‌ ರಾಯಲ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು 2025ರ ಐಪಿಎಲ್‌ ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ, ಇನ್ನುಳಿದ ಆರೂ ಪಂದ್ಯಗಳಲ್ಲಿ ಗೆಲುವು ಪಡೆಯಬೇಕಾದ ಅಗತ್ಯವಿದೆ. ಇದರಲ್ಲಿ ಒಂದರಲ್ಲಿ ಸೋತರೂ ಈ ತಂಡಗಳ ನಾಕ್‌ಔಟ್‌ ಹಾದಿ ಅತ್ಯಂತ ಕಠಿಣವಾಗಲಿದೆ. ಇನ್ನು ಸನ್‌ರೈಸರ್‌ ರೈಸರ್ಸ್‌ ಹೈದರಾಬಾದ್‌ ತಂಡ ಇನ್ನುಳಿದ 7 ಪಂದ್ಯಗಳ ಪೈಕಿ 6 ರಲ್ಲಿ ಗೆಲುವು ಪಡೆದರೆ, ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲಿದೆ.