CSK vs SRH: ಟಿ20 ಕ್ರಿಕೆಟ್ನಲ್ಲಿ ನೂತನ ಮೈಲುಗಲ್ಲು ತಲುಪಿದ ಎಂಎಸ್ ಧೋನಿ!
ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಟಾಸ್ಗೆ ಬರುತ್ತಿದ್ದಂತೆ ಸಿಎಸ್ಕೆ ನಾಯಕ ಎಂಎಸ್ ಧೋನಿ, ತಮ್ಮ ಟಿ20 ಕ್ರಿಕೆಟ್ ವೃತ್ತಿ ಜೀವನದಲ್ಲಿ 400ನೇ ಪಂದ್ಯವನ್ನು ಪೂರ್ಣಗೊಳಿಸಿದರು. ಆ ಮೂಲಕ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಒಳಗೊಂಡ ಎಲೈಟ್ ಲಿಸ್ಟ್ಗೆ ಎಂಎಸ್ ಧೋನಿ ಸೇರ್ಪಡೆಯಾಗಿದ್ದಾರೆ.



ಚೆನ್ನೈ vs ಹೈದರಾಬಾದ್
ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದಾರಾಬಾದ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಎಸ್ಆರ್ಎಚ್ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.

400ನೇ ಟಿ20 ಪಂದ್ಯ ಆಡಿದ ಎಂಎಸ್ ಧೋನಿ
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ಗೆ ಬರುತ್ತಿದ್ದಂತೆ ಎಂಎಸ್ ಧೋನಿ ತಮ್ಮ ಟಿ20 ವೃತ್ತಿ ಜೀವನದಲ್ಲಿ 400ನೇ ಪಂದ್ಯವನ್ನು ಆಡಿದರು. ಆ ಮೂಲಕ ಟಿ20 ಕ್ರಿಕೆಟ್ನಲ್ಲಿ ಎಂಎಸ್ ಧೋನಿ, ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಒಳಗೊಂಡ ಎಲೈಟ್ ಲಿಸ್ಟ್ಗೆ ಸೇರ್ಪಡೆಯಾಗಿದ್ದಾರೆ.

7566 ರನ್ ಸಿಡಿಸಿರುವ ಎಂಎಸ್ ಧೋನಿ
2007ರ ಐಸಿಸಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ ತಂಡವನ್ನು ಮುನ್ನಡೆಸಿದ್ದ ಎಂಎಸ್ ಧೋನಿ, ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೃತ್ತಿ ಜೀವನದಲ್ಲಿ ತಮ್ಮ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ಗೆ 5 ಟ್ರೋಫಿಯನ್ನು ಗೆದ್ದುಕೊಟ್ಟಿದ್ದಾರೆ. ಅವರು ತಮ್ಮ ಟಿ20 ವೃತ್ತಿ ಜೀವನದಲ್ಲಿ 135.90ರ ಸ್ಟ್ರೈಕ್ ರೇಟ್ನಲ್ಲಿ 7566 ರನ್ಗಳನ್ನು ಸಿಡಿಸಿದ್ದಾರೆ.

400ಕ್ಕೂ ಅಧಿಕ ಟಿ20 ಪಂದ್ಯಗಳನ್ನು ಆಡಿದ ಭಾರತೀಯರು
ಮುಂಬೈ ಇಂಡಿಯನ್ಸ್ ಹಿರಿಯ ಬ್ಯಾಟ್ಸ್ಮನ್ ರೋಹಿತ್ ಶರ್ಮಾ 456 ಟಿ20 ಪಂದ್ಯಗಳನ್ನುಆಡುವ ಮೂಲಕ ಈ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ದಿನೇಶ್ ಕಾರ್ತಿಕ್ (412), ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (408) ಹಾಗೂ ಎಂಎಸ್ ಧೋನಿ (400) ಅವರು ಈ ಸಾಧನೆ ಮಾಡಿದ್ದಾರೆ.

ಸಿಎಸ್ಕೆ ನಾಯಕತ್ವಕ್ಕೆ ಮರಳಿದ ಧೋನಿ
ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಋತುರಾಜ್ ಗಾಯಕ್ವಾಡ್ ಮುನ್ನಡೆಸುತ್ತಿದ್ದರು. ಆದರೆ, ಅವರು ಗಾಯಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಎಂಎಸ್ ಧೋನಿ ಸಿಎಸ್ಕೆ ನಾಯಕತ್ವಕ್ಕೆ ಮರಳಿದ್ದಾರೆ.

239 ಪಂದ್ಯಗಳಲ್ಲಿ ಎಂಎಸ್ ಧೋನಿ ನಾಯಕ
ಎಂಎಸ್ ಧೋನಿ ಅವರು 239 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದಾರೆ ಹಾಗೂ ಐದು ಪ್ರಶಸ್ತಿಯನ್ನು ಗೆದ್ದುಕೊಟ್ಟಿದ್ದಾರೆ. 2022ರಲ್ಲಿಯೇ ಸಿಎಸ್ಕೆ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಎಂಎಸ್ ಧೋನಿ ಬಿಟ್ಟುಕೊಟ್ಟಿದ್ದರು. ಆದರೆ, ಟೂರ್ನಿಯ ಎರಡನೇ ಅವಧಿಯಲ್ಲಿ ಮತ್ತೆ ನಾಯಕತ್ವಕ್ಕೆ ಮರಳಿದ್ದರು.