ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಶತಕದ ಜತೆಯಾಟದಲ್ಲಿ ದಾಖಲೆ ಬರೆದ ಗಿಲ್‌-ಸುದರ್ಶನ್‌ ಜೋಡಿ

ಗುಜರಾತ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರು ಐಪಿಎಲ್ ಇತಿಹಾಸದಲ್ಲಿ 3500 ರನ್‌ಗಳನ್ನು ಪೂರ್ಣಗೊಳಿಸಿದ ಅತ್ಯಂತ ಕಿರಿಯ ಆಟಗಾರ ಮತ್ತು 25 ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

1/5

ಗುಜರಾತ್‌ ಟೈಟಾನ್ಸ್‌ ತಂಡದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಜೋಡಿ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಮೊದಲ ವಿಕೆಟ್‌ಗೆ 112 ರನ್‌ಗಳ ಸ್ಕೋರ್ ಕಲೆಹಾಕುವ ಮೂಲಕ ಐಪಿಎಲ್‌ನಲ್ಲಿ ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

2/5

ಶುಭಮನ್‌ ಗಿಲ್‌ ಮತ್ತು ಸಾಯಿ ಸುದರ್ಶನ್‌ ಜೋಡಿ 6ನೇ ಶತಕದ ಜತೆಯಾಟವಾಡುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೊದಲ ವಿಕೆಟ್‌ಗೆ ಅತಿ ಹೆಚ್ಚು ಶತಕದ ಜತೆಯಾಟ ನಡೆಸಿದ ಮೊದಲ ಭಾರತೀಯ ಜೋಡಿ ಎನಿಸಿಕೊಂಡರು. ಈ ಮೂಲಕ ತಲಾ 5 ಶತಕಗಳ ಜತೆಯಾಟ ಹೊಂದಿರುವ ಕೆಎಲ್ ರಾಹುಲ್-ಮಯಾಂಕ್ ಅಗರ್ವಾಲ್ ಮತ್ತು ಗೌತಮ್ ಗಂಭೀರ್-ರಾಬಿನ್ ಉತ್ತಪ್ಪ ಜೋಡಿಯ ದಾಖಲೆಯನ್ನು ಮುರಿದಿದ್ದಾರೆ.

3/5

ಕೆಕೆಆರ್‌ ವಿರುದ್ಧ ಶುಭಮನ್‌ ಗಿಲ್‌, 55 ಎಸೆತಗಳಲ್ಲಿ ಮೂರು ಸಿಕ್ಸರ್‌ ಹಾಗೂ 10 ಮನಮೋಹಕ ಬೌಂಡರಿಗಳೊಂದಿಗೆ 90 ರನ್‌ಗಳನ್ನು ಸಿಡಿಸಿದರು. ಆದರೆ, 18ನೇ ಓವರ್‌ನ ಕೊನೆಯ ಎಸೆತದಲ್ಲಿ ವೈಭವ್‌ ಅರೋರಾಗೆ ವಿಕೆಟ್‌ ಒಪ್ಪಿಸುವ ಮೂಲಕ ಕೇವಲ10 ರನ್‌ ಅಂತರದಲ್ಲಿ ಶತಕ ವಂಚಿತರಾದರು.

4/5

ಸೋಮವಾರ ಇಲ್ಲಿನ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟನ್ಸ್‌ ನೀಡಿದ್ದ 199 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಕೋಲ್ಕತಾ ನೈಟ್‌ ರೈಡರ್ಸ್‌, ಅಜಿಂಕ್ಯ ರಹಾನೆ (50) ಬಿಟ್ಟರೆ ಇನ್ನುಳಿದ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಇದರ ಪರಿಣಾಮವಾಗಿ ಕೆಕೆಆರ್‌ ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್‌ಗಳ ನಷ್ಟಕ್ಕೆ 159 ರನ್‌ಗಳಿಗೆ ಸೀಮಿತವಾಗಿ 39 ರನ್‌ ಅಂತರದ ಸೋಲು ಕಂಡಿತು.

ಇದನ್ನೂ ಓದಿ IPL 2025: ಆರ್‌ಸಿಬಿ ಪರ ಅಚ್ಚರಿಯ ಹೇಳಿಕೆ ಕೊಟ್ಟ ಅಂಬಾಟಿ ರಾಯುಡು!

5/5

ಕೆಕೆಆರ್‌ ತಂಡವನ್ನು 39 ರನ್‌ಗಳಿಂದ ಮಣಿಸಿದ ಗುಜರಾತ್‌ ಟೈಟಾನ್ಸ್‌ ತಂಡ ಅಂಕಪಟ್ಟಿ ಯಲ್ಲಿ ತನ್ನ ಅಗ್ರಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಪ್ಲೇ ಆಫ್‌ ಪ್ರವೇಶಿಸಬೇಕಿದ್ದರೆ, ಇನ್ನುಳಿದ 6 ಪಂದ್ಯಗಳ ಪೈಕಿ ಕನಿಷ್ಠ 2 ಪಂದ್ಯ ಗೆದ್ದರೂ ಸಾಕು. ತಂಡದ ಉಭಯ ಆಟಗಾರರಾದ ಸಾಯಿ ಸುದರ್ಶನ್‌(417 ರನ್‌) ಮತ್ತು ಪ್ರಸಿದ್ಧ್‌ ಕೃಷ್ಣ(16 ವಿಕೆಟ್‌) ಕ್ರಮವಾಗಿ ಆರೆಂಜ್‌ ಮತ್ತು ಪರ್ಪಲ್‌ ಕ್ಯಾಪ್‌ ಹೊಂದಿದ್ದಾರೆ.