ಭುವನೇಶ್ವರ್ಗೆ ಎರಡನೇ ಸ್ಥಾನ: 2026ರ ಐಪಿಎಲ್ ಟೂರ್ನಿಯಲ್ಲಿ ಟಾಪ್ 5 ವಿಕೆಟ್ ಟೇಕರ್ಸ್!
2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್ಗಳ ಗೆಲುವು ಪಡೆಯುವ ಮೂಲಕ ಆರ್ಸಿಬಿ ಸತತ ಎರಡನೇ ಬಾರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಅಂದ ಹಾಗೆ ಈ ಟೂರ್ನಿಯಲ್ಲಿ ಬಹುತೇಕ ಬ್ಯಾಟ್ಸ್ಮನ್ಗಳು ಪ್ರಾಬಲ್ಯ ಸಾಧಿಸಿದ್ದಾರೆ. ಇದರ ಹೊರತಾಗಿಯೂ ಕೆಲ ಬೌಲರ್ಗಳು ಟೂರ್ನಿಯಲ್ಲಿ ಮಿಂಚಿದ್ದಾರೆ. ಅಂದ ಹಾಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಕಬಳಿಸಿದ ಅಗ್ರ ಐವರು ಬೌಲರ್ಗಳನ್ನು ಇಲ್ಲಿ ವಿವರಿಸಲಾಗಿದೆ.
2026ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್ಗಳು! -
ಕಗಿಸೊ ರಬಾಡ
2026ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಗುಜರಾತ್ ಟೈಟನ್ಸ್ ತಂಡದ ಕಗಿಸೊ ರಬಾಡ ಅಗ್ರ ಸ್ಥಾನದಲ್ಲಿದ್ದಾರೆ. ಅವರು 17 ಪಂದ್ಯಗಳಿಂದ 29 ವಿಕೆಟ್ಗಳನ್ನು ಕಿತ್ತು ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ.
ಭುವನೇಶ್ವರ್ ಕುಮಾರ್
2026ರ ಐಪಿಎಲ್ ಟೂರ್ನಿಯಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಸಾಲಿನಲ್ಲಿ ಆರ್ಸಿಬಿ ವೇಗಿ ಭುವನೇಶ್ವರ್ ಕುಮಾರ್ ಇದ್ದಾರೆ. ಇವರು 28 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಜೋಫ್ರಾ ಆರ್ಚರ್
ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ನ ವೇಗಿ ಜೋಫ್ರಾ ಆರ್ಚರ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು 25 ವಿಕೆಟ್ಗಳನ್ನು ಕಬಳಿಸಿದ್ದಾರೆ.
ರಶೀದ್ ಖಾನ್
ಈ ಪಟ್ಟಿಯಲ್ಲಿ ಗುಜರಾತ್ ಟೈಟನ್ಸ್ ತಂಡದ ರಶೀದ್ ಖಾನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇವರು ಆಡಿದ 17 ಪಂದ್ಯಗಳಿಂದ 21 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಅನ್ಷುಲ್ ಕಾಬೋಜ್
ಚೆನ್ನೈ ಸೂಪರ್ ಕಿಂಗ್ಸ್ ಯುವ ವೇಗಿ ಅನ್ಷುಲ್ ಕಾಂಬೋಜ್ 2026ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಅವರು 14 ಪಂದ್ಯಗಳಿಂದ 21 ವಿಕೆಟ್ಗಳನ್ನು ಕಬಳಿಸಿದ್ದಾರೆ.