ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಭುವನೇಶ್ವರ್‌ಗೆ ಎರಡನೇ ಸ್ಥಾನ: 2026ರ ಐಪಿಎಲ್‌ ಟೂರ್ನಿಯಲ್ಲಿ ಟಾಪ್‌ 5 ವಿಕೆಟ್‌ ಟೇಕರ್ಸ್!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚಾಂಪಿಯನ್‌ ಆಗಿದೆ. ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ಧ 5 ವಿಕೆಟ್‌ಗಳ ಗೆಲುವು ಪಡೆಯುವ ಮೂಲಕ ಆರ್‌ಸಿಬಿ ಸತತ ಎರಡನೇ ಬಾರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಅಂದ ಹಾಗೆ ಈ ಟೂರ್ನಿಯಲ್ಲಿ ಬಹುತೇಕ ಬ್ಯಾಟ್ಸ್‌ಮನ್‌ಗಳು ಪ್ರಾಬಲ್ಯ ಸಾಧಿಸಿದ್ದಾರೆ. ಇದರ ಹೊರತಾಗಿಯೂ ಕೆಲ ಬೌಲರ್‌ಗಳು ಟೂರ್ನಿಯಲ್ಲಿ ಮಿಂಚಿದ್ದಾರೆ. ಅಂದ ಹಾಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಅಗ್ರ ಐವರು ಬೌಲರ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

2026ರ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಟಾಪ್‌ 5 ಬೌಲರ್‌ಗಳು!
1/5

ಕಗಿಸೊ ರಬಾಡ

2026ರ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡದ ಕಗಿಸೊ ರಬಾಡ ಅಗ್ರ ಸ್ಥಾನದಲ್ಲಿದ್ದಾರೆ. ಅವರು 17 ಪಂದ್ಯಗಳಿಂದ 29 ವಿಕೆಟ್‌ಗಳನ್ನು ಕಿತ್ತು ಪರ್ಪಲ್‌ ಕ್ಯಾಪ್‌ ಗೆದ್ದಿದ್ದಾರೆ.

2/5

ಭುವನೇಶ್ವರ್‌ ಕುಮಾರ್‌

2026ರ ಐಪಿಎಲ್‌ ಟೂರ್ನಿಯಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಸಾಲಿನಲ್ಲಿ ಆರ್‌ಸಿಬಿ ವೇಗಿ ಭುವನೇಶ್ವರ್‌ ಕುಮಾರ್‌ ಇದ್ದಾರೆ. ಇವರು 28 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

3/5

ಜೋಫ್ರಾ ಆರ್ಚರ್‌

ಈ ಪಟ್ಟಿಯಲ್ಲಿ ರಾಜಸ್ಥಾನ್‌ ರಾಯಲ್ಸ್‌ನ ವೇಗಿ ಜೋಫ್ರಾ ಆರ್ಚರ್‌ ಮೂರನೇ ಸ್ಥಾನದಲ್ಲಿದ್ದಾರೆ. ಅವರು 25 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

4/5

ರಶೀದ್ ಖಾನ್‌

ಈ ಪಟ್ಟಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡದ ರಶೀದ್‌ ಖಾನ್‌ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇವರು ಆಡಿದ 17 ಪಂದ್ಯಗಳಿಂದ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5/5

ಅನ್ಷುಲ್‌ ಕಾಬೋಜ್‌

ಚೆನ್ನೈ ಸೂಪರ್‌ ಕಿಂಗ್ಸ್‌ ಯುವ ವೇಗಿ ಅನ್ಷುಲ್‌ ಕಾಂಬೋಜ್‌ 2026ರ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಅವರು 14 ಪಂದ್ಯಗಳಿಂದ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.