Megha Shetty: ಸೀರೆಯುಟ್ಟು ಸೊಂಟ ಬಳುಕಿಸಿದ ಮೇಘಾ ಶೆಟ್ಟಿ; ಪಡ್ಡೆ ಹುಡುಗರು ಫಿದಾ
ಜೊತೆ ಜೊತೆಯಲಿ' ಧಾರವಾಹಿ ಮೂಲಕ ಪರಿಚಯವಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ತಿಳಿ ಗುಲಾಬಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ.



ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ಸೀರಿಯಲ್ ನಲ್ಲಿ ಅನು ಸಿರಿಮನೆ ಪಾತ್ರದ ಮೂಲಕ ಜನಮನ ಗೆದ್ದ ನಟಿ ಮೇಘಾ ಶೆಟ್ಟಿ (Megha Shetty), ಸದ್ಯ ಕನ್ನಡ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ. ಸೋಶಿಯಲ್ ಮಿಡೀಯಾದಲ್ಲಿ ಆಕ್ಟಿವ್ ಆಗಿರುವ ಅವರು ಹೊಸ ಫೋಟೊ ಶೂಟ್(Photo shoot) ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ನಟಿ ಹಂಚಿಕೊಂಡಿರುವ ಫೋಟೊಗಳು ಪಡ್ಡೆ ಹುಡುಗರ ನಿದ್ದೆ ಕೆಡಿಸಿದೆ.

ಇದೀಗ ಅವರು ತಿಳಿ ಗುಲಾಬಿ ಬಣ್ಣದ ಸೀರೆಯಲ್ಲಿ ಸೋಂಟ ತೋರಿಸಿ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ನಟನೆಯಲ್ಲಿ ಸೈ ಎನಿಸಿಕೊಂಡಿದ್ದ ಮೇಘಾ ಇದೀಗ ನಿರ್ಮಾಣಕ್ಕೂ ಕೈ ಹಾಕಿದ್ದಾರೆ.

ಹಿಂದೆ ನಟಿ ಒಂದೆರಡು ಸೀರಿಯಲ್ ಗಳನ್ನು ನಿರ್ಮಾಣ ಮಾಡಿದ್ದರು. ಇದೀಗ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮುದ್ದು ಸೊಸೆ (Muddu Sose) ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.

ಮೇಘಾ ಶೆಟ್ಟಿ ಈಗಾಗಲೇ ಕನ್ನಡಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಜೊತೆ ಟ್ರಿಪಲ್ ರೈಡಿಂಗ್, ಕೃಷ್ಣ ಹಾಗೂ ನಿಶ್ವಿಕಾ ನಾಯ್ಡು ಜೊತೆ ದಿಲ್ ಪಸಂದ್ ಹಾಗೂ ಧನ್ವೀರ್ ಜೊತೆ ಕೈವಾ ಸಿನಿಮಾಗಳಲ್ಲಿ ನಟಿಸಿದ್ದರು.

ಮೇಘಾ ಈ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಅಭಿಮಾನಿಗಳು ಫಿದಾ ಆಗಿದ್ದಾರೆ. ಸೀರೆಯುಟ್ಟ ನವಿಲು ನೀನು ಎಂದು ಹಲವರು ಕಮೆಂಟ್ ಮಾಡಿದ್ದಾರೆ.