ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ವಿದೇಶಿ ಆಟಗಾರರು!

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2026ರ ಟೂರ್ನಿ ಮುಕ್ತಾಯವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸುವ ಮೂಲಕ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಟ್ರೋಫಿಯನ್ನು ಗೆದ್ದ ವಿದೇಶಿ ಆಟಗಾರರ ಬಗ್ಗೆ ಇಲ್ಲಿ ವಿವರಿಸಲಾಗಿದೆ.

ಅತಿ ಹೆಚ್ಚು ಐಪಿಎಲ್‌ ಟ್ರೋಫಿ ಗೆದ್ದ ವಿದೇಶಿ ಆಟಗಾರರು.
1/5

ಐಪಿಎಲ್ ಇತಿಹಾಸದಲ್ಲಿ ವೆಸ್ಟ್ ಇಂಡೀಸ್‌ನ ಕೈರೊನ್‌ ಪೊಲಾರ್ಡ್ ಅತಿ ಹೆಚ್ಚು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ವಿದೇಶಿ ಆಟಗಾರ. ಪೊಲಾರ್ಡ್ ಮುಂಬೈ ಇಂಡಿಯನ್ಸ್‌ ಐದು ಬಾರಿ ಐಪಿಎಲ್ ಗೆದ್ದಿದ್ದಾರೆ.

2/5

ಈ ಪಟ್ಟಿಯಲ್ಲಿ ಶ್ರೀಲಂಕಾದ ಲಸಿತ್ ಮಾಲಿಂಗ ಎರಡನೇ ಸ್ಥಾನದಲ್ಲಿದ್ದಾರೆ. ಮಾಲಿಂಗ ಪೊಲಾರ್ಡ್‌ಗಿಂತ ಹೆಚ್ಚು ಒಂದು ಟ್ರೋಫಿ ಗೆದ್ದಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಐಪಿಎಲ್ ಪ್ರಶಸ್ತಿಯನ್ನು ಜಯಿಸಿದ್ದಾರೆ.

3/5

ವೆಸ್ಟ್ ಇಂಡೀಸ್‌ನ ಡ್ವೇನ್ ಬ್ರಾವೊ ಕೂಡ ಇದ್ದಾರೆ. ಇವರು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಪರ ತಮ್ಮ ವೃತ್ತಿಜೀವನದಲ್ಲಿ ಮೂರು ಬಾರಿ ಐಪಿಎಲ್ ಗೆದ್ದಿದ್ದಾರೆ.

4/5

ವೆಸ್ಟ್ ಇಂಡೀಸ್‌ನ ಸುನೀಲ್ ನರೇನ್ ತಮ್ಮ ವೃತ್ತಿಜೀವನದಲ್ಲಿ ಮೂರು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅವರು 2026ರ ಐಪಿಎಲ್‌ ಟೂರ್ನಿಯಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಭಾಗವಾಗಿದ್ದರು.

5/5

ಆಸ್ಟ್ರೇಲಿಯಾದ ಜಾಶ್ ಹೇಝಲ್‌ವುಡ್ ಇತ್ತೀಚೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್ ಗೆದ್ದಿದ್ದಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಮೂರು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.