Narendra Modi: ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ ಮೋದಿ; ಫೋಟೋ ನೋಡಿ
ಪ್ರಧಾನಿ ನರೇಂದ್ರ ಮೋದಿಯವರು ಇಂದು ದೆಹಲಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನವನ್ನು (Raksha Bandhan) ಆಚರಿಸಿದ್ದಾರೆ. ಪ್ರತಿಬಾರಿಯಂತೆ ಈ ಬಾರಿಯೂ ಅವರು ಮಕ್ಕಳೊಡನೆ ಹಬ್ಬವನ್ನು ಸಂಭ್ರಮಿಸಿದ್ದಾರೆ. ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ದೇಶದ ನಿವಾಸಿಗಳಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ಕೋರಿದ್ದಾರೆ.



ಪ್ರಧಾನಿ ನರೇಂದ್ರ ಮೋದಿಯವರು ಇಂದು ದೆಹಲಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನವನ್ನು ಆಚರಿಸಿದರು. ಈ ವೇಳೆ ಮಕ್ಕಳು ಮಹಿಳೆಯರು ಸೇರಿದಂತೆ ಅನೇಕರು ಪ್ರಧಾನಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಪ್ರಜಾಪಿತ ಬ್ರಹ್ಮಕುಮಾರಿ ಸಂಘಟನೆಯ ಸೋದರಿಯರು ಮೋದಿಗೆ ರಾಖಿ ಕಟ್ಟಿದ್ದಾರೆ.

ಮೋದಿ ಪ್ರತಿಬಾರಿಯಂತೆ ಈ ಬಾರಿಯೂ ಮಕ್ಕಳೊಂದಿಗೆ ರಕ್ಷಾಬಂಧನ ಆಚರಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂಡ ಆಚರಣೆಗಳಲ್ಲಿ ಭಾಗವಹಿಸಿದ್ದರು.

ರಕ್ಷಾ ಬಂಧನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಶಾಲಾ ಮಕ್ಕಳು ಸಾಮೂಹಿಕವಾಗಿ ರಾಖಿ ಕಟ್ಟು ರಕ್ಷಾಬಂಧನ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ. ಸಹೋದರ ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಗೆ ಬದ್ಧತೆಯ ಮುರಿಯಲಾಗದ ಬಂಧಕ್ಕೆ ಸಮರ್ಪಿತವಾದ 'ರಕ್ಷಾ ಬಂಧನ'ದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಉತ್ಸಾಹದ ಮೂಲವಾಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅಮಿತ್ ಶಾ ಕೂಡ ಟ್ವೀಟ್ ಮಾಡಿದ್ದಾರೆ.

ರಕ್ಷಾ ಬಂಧನವು ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿರುವ ಹಬ್ಬವಾಗಿದೆ ಮತ್ತು ಶತಮಾನಗಳಿಂದ ಆಚರಿಸಲಾಗುತ್ತಿದೆ. ರಕ್ಷಣೆಗಾಗಿ ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಈ ಹಬ್ಬವನ್ನು ಆಚರಿಸುತ್ತಾರೆ.